ಬೆಂಗಳೂರು: ಜಾವೆಲಿನ್ ಥ್ರೋ ತಾರೆ, ಒಲಿಂಪಿಕ್ ಚಿನ್ನದ ಪದಕ ವಿಜೇತ ಕ್ರೀಡಾಪಟು ನೀರಜ್ ಚೋಪ್ರಾ ಅವರು ಭಾರತೀಯ ಸೇನೆಯ ಮೀಸಲು ಘಟಕವಾದ ಟೆರಿಟೋರಿಯಲ್ ಆರ್ಮಿ (ಪ್ರಾದೇಶಿಕ ಸೇನೆ) ಸೇರ್ಪಡೆಯಾಗಿದ್ದಾರೆ.

ನಿನ್ನೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದೆಹಲಿಯ ಕಚೇರಿಯಲ್ಲಿ ನೀರಜ್ ಚೋಪ್ರಾ ಅವರಿಗೆ ಟೆರಿಟೋರಿಯಲ್ ಆರ್ಮಿಯ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆಯ ಲಾಂಛನವನ್ನು ತೊಡಿಸಿ ಅಭಿನಂದಿಸಿದರು.

ಈ ವೇಳೆ ಭಾರತೀಯ ಸೇನೆಯ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಅವರು ಹಾಜರಿದ್ದರು.

ನೀರಜ್ ಚೋಪ್ರಾ ಭಾರತದ ಅತ್ಯುತ್ತಮ ಕ್ರೀಡಾಪಟು. ಅವರ ನಿರಂತರ ಪರಿಶ್ರಮ, ದೇಶಭಕ್ತಿಯು ಭಾರತೀಯ ಮನೋಭಾವದ ಸಂಕೇತ. ಭವಿಷ್ಯದಲ್ಲಿ ಅವರ ಎಲ್ಲಾ ಪ್ರಯತ್ನಗಳಲ್ಲಿ ಅವರಿಗೆ ಯಶಸ್ಸು ಸಿಗಲಿ ಎಂದು ರಾಜನಾಥ್ ಸಿಂಗ್ ಪದವಿ ಪ್ರದಾನ ಮಾಡಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.

2020ರ ಟೊಕಿಯೊ ಒಲಿಂಪಿಕ್ಸ್ನಲ್ಲಿ ನೀರಜ್ ಚಿನ್ನದ ಪದಕ ಗೆದ್ದಿದ್ದರು. 2024 ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಅವರಿಗೆ ಪರಮ ವಿಶಿಷ್ಟ ಸೇವಾ ಮೆಡಲ್, ಪದ್ಮ ಶ್ರೀ ಹಾಗೂ ವಿಶಿಷ್ಟ ಸೇವಾ ಮೆಡಲ್ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ನೀರಜ್ ಚೋಪ್ರಾ ಸಹ ಟೆರಿಟೋರಿಯಲ್ ಆರ್ಮಿ ಸೇರಿದ್ದರ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಟೆರಿಟೋರಿಯಲ್ ಆರ್ಮಿ ಸೇರುವವರು ಭಾರತೀಯ ಸೇನೆಗೆ ಅಗತ್ಯ ಬಿದ್ದಾಗ ಸ್ವಯಂಸೇವಕರ ರೀತಿ ಕೆಲಸ ಮಾಡಬೇಕಾಗುತ್ತದೆ. ಇದರಲ್ಲೂ ಸಹ ಕಮಿಷನ್ಡ್ ಹಾಗೂ ನಾನ್ ಕಮಿಷನ್ಡ್ ಎಂಬ ಎರಡು ಹಂತಗಳಿವೆ. ಕಮಿಷನ್ಡ್ ಹುದ್ದೆಗಳು ಅಧಿಕಾರಿ ಹಂತದ ಹುದ್ದೆಗಳದ್ದಾಗಿದ್ದರೆ, ನಾನ್ ಕಮಿಷನ್ಡ್ ಇತರ ಸೇವಾ ಸಿಬ್ಬಂದಿ ಹಂತದ ಹುದ್ದೆಗಳಾಗಿರುತ್ತವೆ. ದೇಶದಾದ್ಯಂತ ಐದು ವಲಯಗಳನ್ನು ಹೊಂದಿರುವ ಈ ಸೇನೆಯಲ್ಲಿ 40,000 ಕ್ಕೂ ಅಧಿಕ ಸ್ವಯಂಸೇವಕರಿದ್ದಾರೆ.

ಈ ಸೇನೆ ಸೇರುವವರು ವರ್ಷದಲ್ಲಿ ಕನಿಷ್ಠ ಎರಡು ತಿಂಗಳು ಸ್ವಯಂಸೇವಕರಾಗಿ ಭಾರತೀಯ ಸೇನೆಯ ಜೊತೆ ಕೆಲಸ ಮಾಡಬಹುದು.

ಕ್ರಿಕೆಟಿಗ ಎಂ.ಎಸ್. ದೋನಿ, ಕೇಂದ್ರ ಸಚಿವ ಅನುರಾಗ್ ಠಾಕೂರ್, ಕರ್ನಾಟಕ ಕೇಡರ್ನ ಹಿರಿಯ ಐಎಎಸ್ ಅಧಿಕಾರಿ ಕ್ಯಾಫ್ಟನ್ ಮಣಿವಣ್ಣನ್ ಸೇರಿದಂತೆ ಹಲವು ಖ್ಯಾತನಾಮರು ಟೆರಿಟೋರಿಯಲ್ ಆರ್ಮಿಯ ಸದಸ್ಯರಾಗಿದ್ದಾರೆ.
.ಮೊದಲ ಎಸೆತದಲ್ಲೇ ವಿಶ್ವ ಚಾಂಪಿಯನ್ಶಿಪ್ ಫೈನಲ್ಗೆ ಲಗ್ಗೆ ಇಟ್ಟ ನೀರಜ್ ಚೋಪ್ರಾ.ಬ್ರಸೆಲ್ಸ್ ಡೈಮಂಡ್ ಲೀಗ್ಗೆ ನೀರಜ್ ಚೋಪ್ರಾ ಸ್ಪರ್ಧೆ ಇಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.