ಪಟ್ನಾ (ಪಿಟಿಐ): ‘ನನ್ನ ಮಗಳ ಸಾವಿನ ಪ್ರಕರಣದ ತನಿಖೆಯನ್ನು ಪೊಲೀಸರು ಸೂಕ್ತ ರೀತಿಯಲ್ಲಿ ನಡೆಸುತ್ತಿಲ್ಲ. ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ನ ನ್ಯಾಯಮೂರ್ತಿ ನೇತೃತ್ವದ ತಂಡ ಪ್ರಕರಣದ ತನಿಖೆ ನಡೆಸಬೇಕು. ನಮಗೆ ನ್ಯಾಯ ಬೇಕು. ಇಲ್ಲವಾದಲ್ಲಿ ನಾನು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಸಂಶಯಾಸ್ಪದವಾಗಿ ಮೃತಪಟ್ಟಿರುವ ನೀಟ್ ಆಕಾಂಕ್ಷಿಯಾಗಿದ್ದ ವಿದ್ಯಾರ್ಥಿನಿಯೊಬ್ಬರ ತಂದೆ ಒತ್ತಾಯಿಸಿದರು.

ವಿದ್ಯಾರ್ಥಿನಿಯು ತನ್ನ ಹಾಸ್ಟಲ್ ಕೊಠಡಿಯಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹಲವು ದಿನಗಳವರೆಗೆ ಕೋಮಾದಲ್ಲಿ ಇದ್ದ ವಿದ್ಯಾರ್ಥಿನಿಯು ಜ.11ರಂದು ಮೃತಪಟ್ಟದ್ದರು. ಈ ಪ್ರಕರಣದ ತನಿಖೆಯನ್ನು ಬಿಹಾರ ಸರ್ಕಾರ ರಚಿಸಿದ ಎಸ್ಐಟಿ ತಂಡ ನಡೆಸುತ್ತಿದೆ.

‘ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಇದನ್ನು ಅಧಿಕಾರಿಗಳು ಮುಚ್ಚಿ ಹಾಕಲು ನೋಡುತ್ತಿದ್ದಾರೆ. ಬಿಹಾರ ಪೊಲೀಸರು ನಮಗೆ ಹಿಂಸೆ ನೀಡುತ್ತಿದ್ದಾರೆ’ ಎಂದು ವಿದ್ಯಾರ್ಥಿನಿಯ ತಂದೆ ಆರೋಪಿಸಿದರು.