ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಾ: ಅನಾರೋಗ್ಯದಿಂದ ನೀಟ್‌ ಆಕಾಂಕ್ಷಿ ಸಾವು

Published 18 ಫೆಬ್ರುವರಿ 2024, 15:08 IST
Last Updated 18 ಫೆಬ್ರುವರಿ 2024, 15:08 IST
ಅಕ್ಷರ ಗಾತ್ರ

ಕೋಟಾ: ರಾಜಸ್ಥಾನದ ಕೋಟಾದಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದ ಉತ್ತರಪ್ರದೇಶದ ಆಲೀಗಢ ಜಿಲ್ಲೆಯ ನಿವಾಸಿ ಶಿವಂ ರಾಘವ (21) ಎಂಬುವವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಅಧಿಕ ರಕ್ತದೊತ್ತಡ ಮತ್ತು ರಕ್ತದಲ್ಲಿ ಸಕ್ಕರೆಯ ಮಟ್ಟ ಹೆಚ್ಚಾಗಿದ್ದ ಕಾರಣ ಶಿವಂ ಅವರನ್ನು ಎರಡು ದಿವಸಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದರು.

ಶಿವಂ ಅವರು ಕಳೆದ ಮೂರು ವರ್ಷಗಳಿಂದ ಕೋಟಾದಲ್ಲಿ ವಿದ್ಯಾರ್ಥಿನಿಲಯದಲ್ಲಿದ್ದುಕೊಂಡು, ನೀಟ್‌ಗೆ ತಯಾರಿ ನಡೆಸುತ್ತಿದ್ದರು ಎಂದರು.

ಕೋಟಾದಲ್ಲಿ ಕಳೆದ ನಾಲ್ಕು ದಿವಸಗಳಲ್ಲಿ ಅನಾರೋಗ್ಯದಿಂದ ಮೃತಪಟ್ಟಿರುವ ಎರಡನೇ ವಿದ್ಯಾರ್ಥಿ ಇವರಾಗಿದ್ದಾರೆ. ಜಾರ್ಖಂಡ್‌ನ ಜಮ್‌ಶೆಡ್‌ಪುರ ನಿವಾಸಿ ಪರ್‌ನೀತ್‌ ರಾಜ್‌ ರಾಯ್‌ ಎಂಬವರು ಅನಾರೋಗ್ಯದಿಂದ ಗುರುವಾರ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT