ಕೋಟಾ: ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಗೆ (ನೀಟ್) ತಯಾರಿ ನಡೆಸುತ್ತಿದ್ದ ಉತ್ತರಾಖಂಡದ ವಿದ್ಯಾರ್ಥಿಯೊಬ್ಬರು ಹಾಸ್ಟೆಲ್ನ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ.

ದೀಕ್ಷಿತ್ ರಾಜೇಶ್ವರಿ (20) ಮೃತ ವಿದ್ಯಾರ್ಥಿ. ಕಳೆದ ಎರಡು ವರ್ಷಗಳಿಂದ ಕೋಚಿಂಗ್ ಸೆಂಟರ್ವೊಂದರಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಕುನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ. ದೀಕ್ಷಿತ್ ಹಾಸ್ಟೆಲ್ನ ನಾಲ್ಕನೇ ಮಹಡಿಯಲ್ಲಿನ ಕೊಠಡಿಯಲ್ಲಿ ವಾಸಿಸುತ್ತಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ಖಚಿತ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 3ರಂದು ನೀಟ್ ಪರೀಕ್ಷೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.