ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್‌ಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

Published 27 ಜೂನ್ 2024, 16:34 IST
Last Updated 27 ಜೂನ್ 2024, 16:34 IST
ಅಕ್ಷರ ಗಾತ್ರ

ಕೋಟಾ: ವೈದ್ಯಕೀಯ ಕೋರ್ಸ್‌ ಸೇರುವ ಬಯಕೆ ಹೊಂದಿದ್ದ 17 ವರ್ಷ ವಯಸ್ಸಿನ ವಿದ್ಯಾರ್ಥಿ ಹೃಷಿತ್ ಕುಮಾರ್ ಅಗರ್ವಾಲ್ ಶವ ಅವರು ಬಾಡಿಗೆಗೆ ಇದ್ದ ಕಟ್ಟಡದಲ್ಲಿ ಸೀಲಿಂಗ್‌ಗ ಫ್ಯಾನ್‌ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ.

ಜನವರಿ ತಿಂಗಳ ನಂತರದಲ್ಲಿ, ಕೋಚಿಂಗ್ ಪಡೆಯುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ 12ನೆಯ ಪ್ರಕರಣ ಇದು. 2023ರಲ್ಲಿ ಕೋಟಾದಲ್ಲಿ ಒಟ್ಟು 26 ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.

ಹೃಷಿತ್ ಅವರು 12ನೆಯ ತರಗತಿಯ ವಿದ್ಯಾರ್ಥಿ. ಅವರು ಇಲ್ಲಿನ ಕೋಚಿಂಗ್ ಕೇಂದ್ರವೊಂದರಲ್ಲಿ ನೀಟ್‌ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT