ನವದೆಹಲಿ: 2026ರ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕೇಂದ್ರಬಿಂದುವಾಗಿರುವ ‘Guess Paper’ ಅನ್ನು ಖರೀದಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಆಯುರ್ವೇದ ಔಷಧ ಮತ್ತು ಶಸ್ತ್ರಚಿಕಿತ್ಸೆಯ ಪದವಿ(ಬಿಎಎಂಎಸ್) ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಆರೋಪಿಯನ್ನು ಶುಭಂ ಖೈರ್ನರ್ ಎಂದು ಗುರುತಿಸಲಾಗಿದೆ. ಟೆಲಿಗ್ರಾಮ್ ಮೂಲಕ ಪ್ರಶ್ನೆ ಪತ್ರಿಕೆ ಖರೀದಿಸಿದ ಆತ, ಹರಿಯಾಣ ಮೂಲದ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಖೈರ್ನರ್ ಅವರನ್ನು ನಾಸಿಕ್ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ವಹಿಸಿಕೊಂಡಿರುವ ಕೇಂದ್ರ ತನಿಖಾ ದಳದ ನಾಲ್ಕು ತಂಡಗಳು ಖೈರ್ನರ್ ಅವರನ್ನು ವಶಕ್ಕೆ ಪಡೆಯಲು ನಾಸಿಕ್ಗೆ ಆಗಮಿಸಿವೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಈ ಬಂಧನವು ನಾಸಿಕ್ ಮುದ್ರಣಾಲಯದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಅನುಮಾನಗಳಿಗೆ ಇಂಬು ನೀಡಿದೆ. ಆದರೆ, ಪ್ರಶ್ನೆ ಪತ್ರಿಕೆಯನ್ನು ಅಲ್ಲಿ ಮುದ್ರಿಸಲಾಗಿಲ್ಲ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ.

ಪದವಿಪೂರ್ವ ಮಟ್ಟದಲ್ಲಿ ವೈದ್ಯಕೀಯ ಶಿಕ್ಷಣ ಕೋರ್ಸ್ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ಟಿಎ) ಮೇ 3 ರಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಅನ್ನು ನಡೆಸಿತ್ತು.

ಪರೀಕ್ಷೆ ನಡೆದು ಒಂದು ವಾರಕ್ಕೂ ಹೆಚ್ಚು ಸಮಯದ ನಂತರ ಮೇ 12 ರಂದು, ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದ ಬಳಿಕ ಎನ್ಟಿಎ ಪರೀಕ್ಷೆಯನ್ನು ರದ್ದುಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.