ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್ ಪ್ರವೇಶದಲ್ಲಿ ಇಡಬ್ಲ್ಯೂಎಸ್ ಮೀಸಲು; ತುರ್ತು ವಿಚಾರಣೆಗಾಗಿ ಕೇಂದ್ರದ ಮನವಿ

Last Updated 3 ಜನವರಿ 2022, 11:09 IST
ಅಕ್ಷರ ಗಾತ್ರ

ನವದೆಹಲಿ: ನೀಟ್–ಪಿಜಿ ಪ್ರವೇಶದಲ್ಲಿ ಇಡಬ್ಲ್ಯೂಎಸ್‌ ವರ್ಗದಮೀಸಲು ಕೋಟಾಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ತುರ್ತಾಗಿ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಮತ್ತು ಎ.ಎಸ್‌.ಬೋಪಣ್ಣ ಅವರಿದ್ದ ಪೀಠಕ್ಕೆ ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ ಸೋಮವಾರ ಈ ಮನವಿ ಮಾಡಿದರು.

‘ಒಂದು ವೇಳೆ ಮಂಗಳವಾರ ಈ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಲು ಆಗದಿದ್ದರೆ, ಬುಧವಾರವಾದರೂ ಪರಿಗಣಿಸಬೇಕು’ ಎಂದು ಮೆಹ್ತಾ ಮನವಿ ಮಾಡಿದರು. ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರವಿಂದ್‌ ದಾತಾರ್, ಮಂಗಳವಾರ ಅಥವಾ ಬುಧವಾರ ವಿಚಾರಣೆ ನಡೆಸಲು ತಮ್ಮ ತಕರಾರು ಇಲ್ಲ ಎಂದು ತಿಳಿಸಿದರು.

ಪ್ರಸ್ತುತ, ಸುಪ್ರೀಂ ಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ಗುರುವಾರಕ್ಕೆ (ಜ. 6) ನಿಗದಿಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT