ನವದೆಹಲಿ: ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಯು (ಎನ್ಬಿಇಎಂಎಸ್) 2025–26ನೇ ಸಾಲಿನ ‘ನೀಟ್–ಪಿಜಿ’ಯ ಕಟ್ ಅಫ್ ಪರ್ಸೆಂಟೈಲ್ಗಳನ್ನು ಕಡಿತಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಇತರರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಪಿ.ಎಸ್ ನರಸಿಂಹ ಮತ್ತು ಅಲೋಕ್ ಆರಾಧೆ ಅವರಿದ್ದ ನ್ಯಾಯಪೀಠವು, ಕೇಂದ್ರ ಸರ್ಕಾರ, ಎನ್ಬಿಇಎಂಎಸ್, ರಾಷ್ಟ್ರೀಯ ವೈದ್ಯಕೀಯ ಆಯೋಗ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ವಿಚಾರಣೆಯನ್ನು ಫೆಬ್ರುವರಿ 6ಕ್ಕೆ ಮುಂದೂಡಲಾಗಿದೆ.

ದೇಶದಾದ್ಯಂತ 18 ಸಾವಿರಕ್ಕೂ ಅಧಿಕ ವೈದ್ಯಕೀಯ ಸೀಟುಗಳು ಖಾಲಿಯಿದ್ದ ಕಾರಣ ನೀಟ್–ಪಿಜಿ 2025ರ ಪ್ರವೇಶಾತಿಯಲ್ಲಿ ಮೀಸಲು ವರ್ಗಗಳ ಕಟ್ ಅಫ್ ಪರ್ಸೆಂಟೈಲ್ಗಳನ್ನು ಮಂಡಳಿಯು ಶೇ 40ರಿಂದ ಶೂನ್ಯಕ್ಕೆ ಇಳಿಸಿತ್ತು. ಸಾಮಾನ್ಯ ವರ್ಗದವರಿಗೆ ಕಟ್ ಅಫ್ ಪರ್ಸೆಂಟೈಲ್ಗಳನ್ನು ಶೇ 50ರಿಂದ ಶೇ 7ಕ್ಕೆ ಇಳಿಸಲಾಗಿತ್ತು.

ಆಯ್ಕೆ ಪ್ರಕ್ರಿಯೆ ಆರಂಭಗೊಂಡ ಬಳಿಕ ಅರ್ಹತಾ ಮಾನದಂಡಗಳನ್ನು ಬದಲಾಯಿಸುವುದು ಸರಿಯಲ್ಲ ಎಂದು ಕೆಲ ಸಾಮಾಜಿಕ ಕಾರ್ಯಕರ್ತರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.