ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ ಮೊದಲ ವಾರದಲ್ಲಿ NEET-PG ಪರೀಕ್ಷೆ ಸಾಧ್ಯತೆ

Published 6 ಜನವರಿ 2024, 15:31 IST
Last Updated 6 ಜನವರಿ 2024, 15:31 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಸ್ನಾತಕೋತ್ತರ ಜುಲೈ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆಯಿದೆ. ಆದರೆ ರಾಷ್ಟ್ರೀಯ ನಿರ್ಗಮನ ಪರೀಕ್ಷೆ ( (NExT) ಈ ವರ್ಷ ನಡೆಯುವುದಿಲ್ಲ ಎಂದು ಮೂಲಗಳು ಶನಿವಾರ ತಿಳಿಸಿವೆ.

ನೀಟ್-ಪಿಜಿ ಪರೀಕ್ಷೆ ಜುಲೈ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆಯಿದ್ದು, ಆಗಸ್ಟ್ ಮೊದಲ ವಾರದಲ್ಲಿ ಕೌನ್ಸೆಲಿಂಗ್ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದೆನ್ನಲಾಗಿದೆ.

ನೀಟ್-ಪಿಜಿ ಪರೀಕ್ಷೆಯು ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆ, 2019ರ ಅಡಿಯಲ್ಲಿ ವಿವಿಧ ಎಂಡಿ/ಎಂಎಸ್‌ ಮತ್ತು ಪಿಜಿ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ನಡೆಸುವ ಅರ್ಹತಾ ಮತ್ತು ರ್ಯಾಂಕಿಂಗ್ ಪರೀಕ್ಷೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT