ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಗಸ್ಟ್ ಮಧ್ಯದಲ್ಲಿ ನೀಟ್‌–ಪಿಜಿ ಪರೀಕ್ಷೆ ನಡೆಯುವ ಸಾಧ್ಯತೆ

Published 2 ಜುಲೈ 2024, 13:31 IST
Last Updated 2 ಜುಲೈ 2024, 13:31 IST
ಅಕ್ಷರ ಗಾತ್ರ

ನವದೆಹಲಿ: ವೈದ್ಯಕೀಯ ಕ್ಷೇತ್ರದ ಸ್ನಾತಕೋತ್ತರ ಕೋರ್ಸ್‌ ಪ್ರವೇಶಕ್ಕೆ ಅಗತ್ಯವಿರುವ ನೀಟ್‌–ಪಿಜಿ ಪರೀಕ್ಷೆ ಆಗಸ್ಟ್ ಮಧ್ಯದಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪರಿಷ್ಕೃತ ದಿನಾಂಕವನ್ನು ಈ ವಾರ ಪ್ರಕಟಿಸುವ ನಿರೀಕ್ಷೆಯಿದೆ.

ಈ ಸಂಬಂಧ ಸೋಮವಾರ ಕೇಂದ್ರ ಗೃಹ ಸಚಿವಾಲಯದಲ್ಲಿ ಸಭೆ ನಡೆದಿದೆ. ಆರೋಗ್ಯ ಸಚಿವಾಲಯ, ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ಬಿಇಎಂಎಸ್), ಇದರ ತಾಂತ್ರಿಕ ಪಾಲುದಾರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಮತ್ತು ಸೈಬರ್ ವಿಭಾಗದ ಅಧಿಕಾರಿಗಳು ಯಾವುದೇ ಲೋಪವಾಗದಂತೆ ಪರೀಕ್ಷೆ ನಡೆಸುವ ಕುರಿತು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಮೇ 5ರಂದು ನಡೆದಿದ್ದ ನೀಟ್–ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮಗಳು ನಡೆದಿವೆ ಎಂಬ ಕೂಗು ಕೇಳಿಬಂದಿತ್ತು. ಈ ವಿವಾದದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 23 ರಂದು ನಡೆಯಬೇಕಿದ್ದ, ನೀಟ್–ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಮುಂದೂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT