ಪಟ್ನಾ: ನೀಟ್ (ಯುಜಿ)– 2024ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಮುಖ್ಯ ಆರೋಪಿ ಸಂಜೀವ್ ಕುಮಾರ್ ಸಿಂಗ್ ಅವರನ್ನು ಬಿಹಾರ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗ(ಇಒಯು) ಬಂಧಿಸಿದೆ.

‘ಖಚಿತ ಮಾಹಿತಿಯ ಆಧಾರದಲ್ಲಿ ಶೋಧ ನಡೆಸಿದಾಗ ಆರೋಪಿ ಸಿಂಗ್ ಅಪಾರ್ಟ್ಮೆಂಟ್ವೊಂದರಲ್ಲಿ ಪತ್ತೆಯಾಗಿದ್ದಾರೆ’ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ನಳಂದ ಸರ್ಕಾರಿ ಕಾಲೇಜಿನಲ್ಲಿ ತಾಂತ್ರಿಕ ಸಹಾಯಕರಾಗಿ ನೇಮಕಗೊಂಡಿದ್ದ ಸಿಂಗ್ ಅಲಿಯಾಸ್ ಸಂಜೀವ್ ಮುಖಿಯಾ ಅವರನ್ನು ಹುಡುಕಿಕೊಟ್ಟವರಿಗೆ 3 ಲಕ್ಷ ಬಹುಮಾನ ಘೋಷಣೆಯಾಗಿತ್ತು.

‘ಬಿಹಾರ ಲೋಕಸೇವಾ ಆಯೋಗ 2024ರಲ್ಲಿ ನಡೆಸಿದ್ದ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿಯೂ ಸಿಂಗ್ ಭಾಗಿಯಾಗಿದ್ದಾರೆ ಎಂಬ ಆರೋಪವಿದೆ. ಪ್ರಸ್ತುತ ಸಿಂಗ್ ಅವರನ್ನು ಇಒಯು ಮತ್ತು ಸಿಬಿಐ ವಿಚಾರಣೆಗೆ ಒಳಪಡಿಸಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರ, ರಾಜಸ್ಥಾನ, ಉತ್ತರಪ್ರದೇಶ, ಹರಿಯಾಣ ಮತ್ತು ಪಂಜಾಬ್ಗಳಲ್ಲಿ ವ್ಯಾಪಕವಾದ ಅಕ್ರಮ ಜಾಲವನ್ನು ಹೊಂದಿರುವ ಮುಖಿಯಾ ಗ್ಯಾಂಗ್ ಮೇಲೆ ಹಲವು ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.