ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್‌–ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಐವರ ಬಂಧನ

Published 23 ಜೂನ್ 2024, 19:55 IST
Last Updated 23 ಜೂನ್ 2024, 19:55 IST
ಅಕ್ಷರ ಗಾತ್ರ

ಪಟ್ನಾ: ನೀಟ್‌–ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಚುರುಕುಗೊಳಿಸಿರುವ ಬಿಹಾರ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗವು, ಭಾನುವಾರ ಐದು ಮಂದಿಯನ್ನು ಬಂಧಿಸಿದೆ.

ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 18ಕ್ಕೆ ಏರಿಕೆ ಆಗಿದೆ. ನೀಟ್‌–ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ಸಿಬಿಐ ಎಫ್‌ಐಆರ್‌ ದಾಖಲಿಸಿದ ಮಾರನೆಯ ದಿನ ಈ ಬಂಧನ ಆಗಿದೆ.

ಬಲದೇವ ಕುಮಾರ್, ಮುಕೇಶ್ ಕುಮಾರ್, ಪಂಕು ಕುಮಾರ್, ರಾಜೀವ್ ಕುಮಾರ್ ಮತ್ತು ಪರಮಜೀತ್ ಸಿಂಗ್ ಎನ್ನುವವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇವರೆಲ್ಲರೂ ನಳಂದ ಮೂಲದವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT