ನವದೆಹಲಿ: ‘ನೀಟ್–ಯುಜಿ’ 2026ರ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿ ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್ಟಿಎ) ಅಧ್ಯಕ್ಷ ಅಭಿಷೇಕ್ ಸಿಂಗ್ ಅವರು ಸಂಸದೀಯ ಸ್ಥಾಯಿ ಸಮಿತಿ ಮುಂದೆ ಗುರುವಾರ ಹಾಜರಾಗಿ, ಹೇಳಿಕೆ ದಾಖಲಿಸಿದರು.

ಸಮಿತಿ ಮುಂದೆ ಹಾಜರಾಗುವಂತೆ ಜೋಶಿ ಹಾಗೂ ಸಿಂಗ್ ಅವರಿಗೆ ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ನೇತೃತ್ವದ ಶಿಕ್ಷಣ, ಮಹಿಳೆಯರು, ಮಕ್ಕಳು, ಯುವಜನತೆ ಹಾಗೂ ಕ್ರೀಡೆ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಬುಧವಾರ ಸೂಚಿಸಿತ್ತು. ಸಮಿತಿ ಸಭೆ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಸಂಸದರು ಎನ್ಟಿಎ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರೆ, ವಿಪಕ್ಷಗಳ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಹೀಗಾಗಿ, ಸಭೆಯು ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ನಡುವಿನ ಜಟಾಪಟಿಗೆ ಸಾಕ್ಷಿಯಾಯಿತು.

ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ದಿಗ್ವಿಜಯ್ ಸಿಂಗ್, ‘22 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಇಂತಹ ಸನ್ನಿವೇಶ ಹೇಗೆ ಮತ್ತು ಏಕೆ ಸೃಷ್ಟಿಯಾಯಿತು ಎಂಬ ಬಗ್ಗೆ ಅವರಿಂದ (ಜೋಶಿ ಮತ್ತು ಅಭಿಷೇಕ್ ಸಿಂಗ್) ಉತ್ತರ ಬಯಸಿದ್ದೇವೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-51-1610429412

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.