ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಂಗಾಳದಲ್ಲಿ ವಾಮಾಚಾರದ ಶಂಕೆ: ಇಬ್ಬರು ಮಹಿಳೆಯರ ಹತ್ಯೆ

Published : 14 ಸೆಪ್ಟೆಂಬರ್ 2024, 11:24 IST
Last Updated : 14 ಸೆಪ್ಟೆಂಬರ್ 2024, 11:24 IST
ಫಾಲೋ ಮಾಡಿ
Comments

ಸುರಿ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದಲ್ಲಿ ಇಬ್ಬರು ಮಧ್ಯವಯಸ್ಕ ಮಹಿಳೆಯರು ವಾಮಾಚಾರ ಮಾಡುತ್ತಿದ್ದಾರೆ ಎಂದು ಶಂಕಿಸಿ ನೆರೆಹೊರೆಯವರು ಅವರನ್ನು ಥಳಿಸಿ ಹತ್ಯೆ ಮಾಡಿದ್ದಾರೆ.

ಬಿರ್ಭುಮ್ ಜಿಲ್ಲೆಯ ಮಯೂರೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯರು ಬುಡಕಟ್ಟು ಸಮುದಾಯದವರಾಗಿದ್ದು ಅವರ ಶವಗಳು ಕಾಲುವೆಯೊಂದರಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿದಂತೆ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಮನೆಗಳಿಂದ ಅವರನ್ನು ಎಳೆದುಕೊಂಡು ಬಂದು ಮರಕ್ಕೆ ಕಟ್ಟಲಾಯಿತು. ನಂತರ ಕಟ್ಟಿಗೆ, ಕೋಲುಗಳಿಂದ ಥಳಿಸಿ ಹತ್ಯೆ ಮಾಡಲಾಯಿತು ಎಂದು ಅವರ ಸಂಬಂಧಿಗಳು ಹೇಳಿದ್ದಾರೆ.

ಇದು ವಾಮಚಾರಕ್ಕೆ ನಡೆದಿರುವ ಹತ್ಯೆ ಎಂದು ಕಾಣುತ್ತದೆ. ಆದರೆ ಇತರೆ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ, ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ನಂತರ ಅವರ ಕುಟುಂಬದವರಿಗೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT