ಕಠ್ಮಂಡು: ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಮತ್ತುಮಾಜಿ ಪ್ರಧಾನಿ ಪುಷ್ಪಕಮಲ್ ದಹಲ್ ‘ಪ್ರಚಂಡ’ ಅವರ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವ ಉದ್ದೇಶದಿಂದ ಮಂಗಳವಾರ ನಡೆಯಬೇಕಿದ್ದ ನೇಪಾಳ ಕಮ್ಯುನಿಸ್ಟ್ ಪಕ್ಷದ ಅತ್ಯಂತ ಮಹತ್ವದ್ದ ಸಭೆಯನ್ನು ಅನಿರ್ದಿಷ್ಟ ಕಾಲ ಮುಂದೂಡಲಾಗಿದೆ.

ಮಂಗಳವಾರ ಬೆಳಿಗ್ಗೆ 11ಕ್ಕೆ ಸಭೆ ನಿಗದಿಯಾಗಿತ್ತು. ಆದರೆ, ಇಬ್ಬರೂ ನಾಯಕರು ಅನೌಪಚಾರಿಕ ಮಾತುಕತೆ ಮೂಲಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಇನ್ನಷ್ಟು ಸಮಯಬೇಕು ಎಂದು ಹೇಳಿದ ಕಾರಣ ಸಭೆಯನ್ನು ಮುಂದೂಡಲಾಯಿತು ಎಂದು ಸ್ಥಾಯಿ ಸಮಿತಿ ಸದಸ್ಯ ಗಣೇಶ್ ಶಾ ತಿಳಿಸಿದ್ದಾರೆ.

ಕಳೆದ ಬುಧವಾರ ಪ್ರಧಾನಿ ಒಲಿ ಅವರ ಅಧಿಕೃತ ನಿವಾಸದಲ್ಲಿ ಸ್ವಲ್ಪ ಹೊತ್ತು ಸಭೆ ನಡೆದಿತ್ತು. ಆದರೆ, ಈ ಸಭೆಗೆ ಒಲಿ ಬಂದಿರಲಿಲ್ಲ. ಹೀಗಾಗಿ ಜುಲೈ 28ರಂದು ಮತ್ತೆ ಸಭೆ ಕರೆಯಲು ತೀರ್ಮಾನಿಸಲಾಗಿತ್ತು. ಆದರೆ, ಇಬ್ಬರೂ ನಾಯಕರು ಸಮಯಾವಕಾಶ ಕೇಳಿದ ಕಾರಣ ಮಂಗಳವಾರ ಸಭೆ ನಡೆಯಲಿಲ್ಲ. ಅವರೊಂದಿಗೆ ಚರ್ಚೆ ನಡೆಸಿದ ನಂತರ ಮುಂದಿನ ಸಭೆಯ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಪ್ರಧಾನಿ ಅವರ ಮಾಧ್ಯಮ ಸಲಹೆಗಾರ ಸೂರ್ಯ ಥಾಪ ತಿಳಿಸಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.