ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಾಲದಲ್ಲಿ ಪ್ರಶಸ್ತಿ ಸಿಗದೆಂಬ ನಂಬಿಕೆ ತಪ್ಪೆಂದು ಸಾಬೀತು: ಮೋದಿಗೆ ಖಾದ್ರಿ

Last Updated 6 ಏಪ್ರಿಲ್ 2023, 4:27 IST
ಅಕ್ಷರ ಗಾತ್ರ

ನವದೆಹಲಿ: ‘ಇಂಥ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಬಿಜೆಪಿ ಸರ್ಕಾರ ನೀಡುವುದಿಲ್ಲ ಎಂಬ ನನ್ನ ನಂಬಿಕೆ ತಪ್ಪೆಂದು ಸಾಬೀತಾಗಿದೆ’ ಎಂದು ಪದ್ಮಶ್ರೀ ಪುರಸ್ಕೃತ, ಕರ್ನಾಟಕದ ಬಿದರಿ ಕಲಾವಿದ ಷಾ ರಶೀದ್ ಅಹ್ಮದ್ ಖಾದ್ರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿದರು.

ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಖಾದ್ರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭ ಮುಗಿದ ನಂತರ, ಪ್ರಧಾನಮಂತ್ರಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.

ಎಲ್ಲ ಸಾಧಕರಿಗೂ ಶುಭಕೋರುತ್ತಾ, ಹಸ್ತಲಾಘವ ನೀಡುತ್ತ ಬಂದ ಪ್ರಧಾನಿ ಮೋದಿ, ಖಾದ್ರಿ ಅವರ ಬಳಿಗೂ ಬಂದರು. ಆಗ ಪ್ರಧಾನಿಯವರ ಕೈಗಳನ್ನು ಎರಡೂ ಕೈಗಳಿಂದ ಹಿಡಿದುಕೊಂಡ ಖಾದ್ರಿ, ‘ಯುಪಿಎ ಸರ್ಕಾರದ ಅವಧಿಯಲ್ಲಿ ಪದ್ಮ ಪ್ರಶಸ್ತಿಯನ್ನು ನಿರೀಕ್ಷಿಸಿದ್ದೆ. ಆದರೆ ನನಗೆ ಅದು ಸಿಗಲಿಲ್ಲ. ನಿಮ್ಮ ಸರ್ಕಾರ ಬಂದಾಗ, ಬಿಜೆಪಿ ಸರ್ಕಾರ ನನಗೆ ಯಾವುದೇ ಪ್ರಶಸ್ತಿ ನೀಡುವುದಿಲ್ಲ ಎಂದು ಭಾವಿಸಿದ್ದೆ. ಆದರೆ ನೀವು ನನ್ನ ನಂಬಿಕೆ ತಪ್ಪು ಎಂದು ಸಾಬೀತುಪಡಿಸಿದ್ದೀರಿ. ನಿಮಗೆ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ಅರ್ಪಿಸುವೆ’ ಎಂದು ಖಾದ್ರಿ ಹೇಳಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿಯವರು ಮುಗುಳ್ನಕ್ಕು ಮುಂದೆ ನಡೆದರು. ಗೃಹ ಸಚಿವ ಅಮಿತ್‌ ಶಾ ಅವರು ಇಬ್ಬರ ನಡುವಿನ ಸಂಭಾಷಣೆಗೆ ಸಾಕ್ಷಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT