ಮಸೂದೆ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆ ವೇಳೆ ಮಾತನಾಡಿದ ಅವರು, ‘ಹೊಸ ಮಸೂದೆಗೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ. ತನ್ನ ಅಧಿಕಾರದ ಅವಧಿಯಲ್ಲಿ ಅತ್ಯಾಚಾರ ಮತ್ತು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದಂತಹ ಘಟನೆಗಳನ್ನು ತಡೆಯುವಲ್ಲಿ ಟಿಎಂಸಿ ಸರ್ಕಾರ ವಿಫಲವಾಗಿದೆ’ ಎಂದು ಅಧಿಕಾರಿ ಹೇಳಿದ್ದಾರೆ.
ಮಸೂದೆ ಅಂಗೀಕಾರಗೊಂಡ ಬಳಿಕ ರಾಜ್ಯ ಸರ್ಕಾರ ಕೂಡಲೇ ಅದನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕಳೆದೆರಡು ವರ್ಷಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಸಂಭವಿಸಿದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಗಳ ಕುರಿತ ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿದ ಅಧಿಕಾರಿ, ‘ಯಾವುದೇ ಪ್ರಕರಣದಲ್ಲಿ ಸಿಬಿಐ ತನಿಖೆ ವಹಿಸಿಕೊಂಡಿಲ್ಲ. ಇಂತಹ ಪ್ರಕರಣಗಳ ಅಪರಾಧಿಗಳನ್ನು ಬಂಧಿಸುವಲ್ಲಿ ಮತ್ತು ಕಠಿಣ ಶಿಕ್ಷೆ ಕೊಡಿಸುವಲ್ಲಿ ರಾಜ್ಯ ತನಿಖಾ ತಂಡಗಳು ವಿಫಲವಾಗಿವೆ’ ಎಂದು ವಾಗ್ದಾಳಿ ನಡೆಸಿದ್ದಾರೆ.
ಅತ್ಯಾಚಾರ ಮತ್ತು ಕೊಲೆ ಎಸಗಿದ ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಿ ಮರಣದಂಡನೆ ಪ್ರಸ್ತಾಪಿಸಿರುವ ಅತ್ಯಾಚಾರ ತಡೆ ಮಸೂದೆಯನ್ನು ಪಶ್ಚಿಮ ಬಂಗಾಳದ ವಿಧಾನಸಭೆ ಇಂದು (ಮಂಗಳವಾರ) ಸರ್ವಾನುಮತದಿಂದ ಅಂಗೀಕರಿಸಿದೆ.