ನವದೆಹಲಿ: ಭಾರತದಲ್ಲಿನ ಕೋವಿಡ್–19 ಹೊಸ ತಳಿಗಳು ಮೂಲ ತಳಿಗಿಂತಲೂ ಹೆಚ್ಚು ಸಾಂಕ್ರಾಮಿಕ ಹಾಗೂ ಅಪಾಯಕಾರಿಯಾಗಿರಬಲ್ಲವು ಎಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಯ (ಏಮ್ಸ್) ಮುಖ್ಯಸ್ಥ ಡಾ.ರಣದೀಪ್ ಗುಲೆರಿಯಾ ಹೇಳಿದ್ದಾರೆ.

‘ಎನ್‌ಡಿಟಿವಿ’ಗೆ ನೀಡಿದ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಭಾರತದಲ್ಲಿ ‘ಹರ್ಡ್ ಇಮ್ಯೂನಿಟಿ’ ಎಂಬುದು ಭ್ರಮೆ ಎಂದಿದ್ದಾರೆ.

ಓದಿ:ನಾಲ್ಕು ರಾಜ್ಯಗಳಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆ: ದೇಶದಲ್ಲಿ ಎರಡನೇ ಅಲೆ ಆತಂಕ

ಮಹಾರಾಷ್ಟ್ರ, ಕೇರಳ, ಮಧ್ಯ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ದೇಶದಲ್ಲಿ ಎರಡನೇ ಅಲೆಯ ಆತಂಕ ಸೃಷ್ಟಿಸಿದೆ.

ಹೊಸ ತಳಿಗಳು ಹೆಚ್ಚು ಮಾರಕವೇ ಅಥವಾ ಅಲ್ಲವೇ ಎಂಬುದಕ್ಕಿಂತಲೂ ಅವುಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಗುಲೆರಿಯಾ ಹೇಳಿದ್ದಾರೆ.

ಓದಿ:ಕೋವಿಡ್:ಗಡಿಯಲ್ಲಿ ಬಿಗಿ ಕ್ರಮ,ಲಾಕ್ ಡೌನ್ ಸದ್ಯಕ್ಕಿಲ್ಲ: ಸುಧಾಕರ್

ಮಹಾರಾಷ್ಟ್ರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಮೂರು ಜಿಲ್ಲೆಗಳಲ್ಲಿ ಲಾಕ್‌ಡೌನ್ ಘೋಷಿಸಲಾಗಿದೆ. ಪುಣೆಯಲ್ಲಿ ರಾತ್ರಿ ಕರ್ಫ್ಯೂ ಘೋಷಿಸಲಾಗಿದೆ.

ಮಹಾರಾಷ್ಟ್ರ, ಪಂಜಾಬ್, ಚತ್ತೀಸಗಢ ಮತ್ತು ಮಧ್ಯಪ್ರದೇಶದಲ್ಲಿ ಕೊರೊನಾ ಸೋಂಕು ಮತ್ತೆ ಉಲ್ಬಣಗೊಂಡಿದೆ. ಪ್ರತಿನಿತ್ಯ ಸಾವಿರಾರು ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.

ಓದಿ:ಮಹಾರಾಷ್ಟ್ರ: ಜನರ ನಿರ್ಲಕ್ಷ್ಯದಿಂದ ಪ್ರಕರಣಗಳಲ್ಲಿ ಏರಿಕೆ -ಆರೋಗ್ಯ ತಜ್ಞರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.