ನವದೆಹಲಿ : ಖಾಸಗಿ ಕಂಪನಿಯೊಂದಕ್ಕೆ ಡ್ರೋನ್ಗಳ ಆಮದು ಪ್ರಕ್ರಿಯೆಯನ್ನು ಸುಗಮಗೊಳಿಸಲು ₹2.5 ಲಕ್ಷ ಲಂಚ ಪಡೆದ ಆರೋಪದಡಿ ಇಬ್ಬರನ್ನು ಸಿಬಿಐ ಶನಿವಾರ ಬಂಧಿಸಿದೆ.

ಪ್ರಮುಖ ಕಾರ್ಪೊರೇಟ್ ಸಂಸ್ಥೆಯೊಂದರ ಹಿರಿಯ ಉಪಾಧ್ಯಕ್ಷ ಭರತ್ ಮಾಥುರ್ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ವಾಯು ಯೋಗ್ಯತಾ ನಿರ್ದೇಶನಾಲಯದ ಉಪ ಮಹಾನಿರ್ದೇಶಕ ಮುದಾವತ್ ದೇವೂಲಾ ಬಂಧಿತರು.

‘ಖಾಸಗಿ ಏರೋಸ್ಪೇಸ್ ಕಂಪನಿಯೊಂದಕ್ಕೆ ಸಂಬಂಧಿಸಿದಂತೆ ಡಿಜಿಸಿಎಯಲ್ಲಿ ಬಾಕಿ ಇರುವ ಅರ್ಜಿಗಳಿಗೆ ಅನುಮೋದನೆ ನೀಡಲು ಮುದಾವತ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ದಾಳಿ ವೇಳೆ, ₹2.5 ಲಕ್ಷ ನಗದನ್ನೂ ವಶಪಡಿಸಿ ಕೊಳ್ಳಲಾಗಿದೆ’ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.

‘ದೆಹಲಿಯಲ್ಲಿ ಇಬ್ಬರು ಆರೋಪಿಗಳಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ಸಿಬಿಐ ದಾಳಿ ನಡೆಸಿದ್ದು, ₹37 ಲಕ್ಷ ಮೌಲ್ಯದ ನಗದು, ಚಿನ್ನ, ಬೆಳ್ಳಿ ನಾಣ್ಯಗಳು ಮತ್ತು ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿದೆ’ ಎಂದು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-51-1588766823

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.