ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುಪ್ರೀಂ ಕೋರ್ಟ್‌ನ 75ನೇ ವಾರ್ಷಿಕೋತ್ಸವ: ಹೊಸ ಧ್ವಜ, ಲಾಂಛನ ಅನಾವರಣ

Published 1 ಸೆಪ್ಟೆಂಬರ್ 2024, 13:39 IST
Last Updated 1 ಸೆಪ್ಟೆಂಬರ್ 2024, 13:39 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂ ಕೋರ್ಟ್‌ನ 75ನೇ ವಾರ್ಷಿಕೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಭಾನುವಾರ) ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದ್ದಾರೆ.

ದೆಹಲಿಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ (ಎನ್‌ಐಎಫ್‌ಟಿ) ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ರೌಪದಿ ಮುರ್ಮು ಅವರು ನ್ಯಾಯ ಮತ್ತು ಪ್ರಜಾಪ್ರಭುತ್ವವನ್ನು ಸಂಕೇತಿಸುವ ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು ಎಂದು ‘ಲೈವ್ ಲಾ’ ವರದಿ ಮಾಡಿದೆ.

ಹೊಸ ಧ್ವಜವು ದೇಶದ ಸಂವಿಧಾನ, ಅಶೋಕ ಚಕ್ರ, ಸುಪ್ರೀಂ ಕೋರ್ಟ್‌ನ ಸಾಂಪ್ರದಾಯಿಕ ಕಟ್ಟಡವನ್ನು ಒಳಗೊಂಡಿದೆ.

ದ್ರೌಪದಿ ಮುರ್ಮು ಮಾತನಾಡಿ, ‘ನಮ್ಮ ನ್ಯಾಯಾಂಗ ವ್ಯವಸ್ಥೆಯ ಮುಂದೆ ಅನೇಕ ಸವಾಲುಗಳಿವೆ. ಅದಕ್ಕಾಗಿ ಎಲ್ಲರೂ ಒಟ್ಟಾಗಿ ಸಂಘಟಿತ ಪ್ರಯತ್ನ ಮಾಡಬೇಕಾಗುತ್ತದೆ. ಉದಾಹರಣೆಗೆ, ಸಾಕ್ಷಿಗಳು ಮತ್ತು ಸಾಕ್ಷಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನ್ಯಾಯಾಂಗ, ಸರ್ಕಾರ ಮತ್ತು ಪೊಲೀಸರು ಜಂಟಿಯಾಗಿ ಪರಿಹರಿಸಬೇಕು’ ಎಂದು ತಿಳಿಸಿದ್ದಾರೆ.

‘ಇತ್ತೀಚಿನ ದಿನಗಳಲ್ಲಿ ಸಮಯೋಚಿತ ಆಡಳಿತ, ಮೂಲಸೌಕರ್ಯ, ತರಬೇತಿ ಮತ್ತು ಮಾನವ ಸಂಪನ್ಮೂಲದ ಲಭ್ಯತೆಯಲ್ಲಿ ತಕ್ಕಮಟ್ಟಿಗೆ ಸುಧಾರಣೆಯಾಗಿದೆ. ಆದರೆ, ಈ ಎಲ್ಲಾ ಕ್ಷೇತ್ರಗಳಲ್ಲಿ ತ್ವರಿತಗತಿಯಲ್ಲಿ ಇನ್ನಷ್ಟು ಸುಧಾರಣೆ ಮಾಡಬೇಕಾಗಿದೆ. ಹಾಗೆಯೇ ಇತ್ತೀಚಿನ ವರ್ಷಗಳಲ್ಲಿ ಆಯ್ಕೆ ಸಮಿತಿಗಳಲ್ಲಿನ ಮಹಿಳೆಯರ ಸಂಖ್ಯೆ ಹೆಚ್ಚಾಗಿರುವುದು ಸಂತಸ ಮೂಡಿಸಿದೆ’ ಎಂದು ಮುರ್ಮು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT