ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕಬಳಕೆಯ ಪ್ಲಾಸ್ಟಿಕ್ ನಿಷೇಧ: ಕೇಂದ್ರದ ಮಾರ್ಗಸೂಚಿ

Last Updated 4 ಜೂನ್ 2022, 19:31 IST
ಅಕ್ಷರ ಗಾತ್ರ

ನವದೆಹಲಿ: ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನಿಷೇಧ ಆದೇಶ ಜಾರಿಗೆ ಒತ್ತು ನೀಡುವಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶನಿವಾರ ಸೂಚಿಸಿದೆ. ‘ಸ್ವಚ್ಛ ಹಾಗೂ ಹಸಿರು’ ಕಾರ್ಯಕ್ರಮದಡಿ ವಾತಾವರಣ ಶುದ್ಧೀಕರಣಕ್ಕೆ ಕೊಡುಗೆ ನೀಡುವಂತೆ ಸೂಚಿಸಲಾಗಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಸಚಿವಾಲಯದ ಸೂಚನೆಯನ್ವಯ 4,704 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 2,591 ಘಟಕಗಳು ಈಗಾಗಲೇ ಏಕಬಳಕೆಯ ಪ್ಲಾಸ್ಟಿಕ್‌ ನಿಷೇಧಿಸಿ ಆದೇಶ ಹೊರಡಿಸಿವೆ. ಆದರೆ ಉಳಿದ 2,113 ನಗರ ಸ್ಥಳೀಯ ಸಂಸ್ಥೆಗಳು ಇದೇ ಜೂನ್ 30ರೊಳಗೆ ಇದೇ ಕ್ರಮವನ್ನು ಅನುಸರಿಸಲು ಆಯಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ನಿರ್ದೇಶಿಸಿದೆ.

ವಿಶ್ವ ಪರಿಸರ ದಿನಾಚರಣೆಯ ಮುನ್ನಾದಿನ ಪ್ರಕಟಣೆ ಹೊರಡಿಸಿರುವ ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯ, ದೇಶವನ್ನು ಏಕಬಳಕೆಯ ಪ್ಲಾಸ್ಟಿಕ್‌ ಮುಕ್ತಗೊಳಿಸಲು ನಿಗದಿಪಡಿಸಿರುವ ವಿವಿಧ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳುವಂತೆ ಸೂಚಿಸಿದೆ.

ಬೃಹತ್ ಪ್ರಮಾಣದಲ್ಲಿ ಪ್ಲಾಸ್ಟಿಕ್ ಕಸ ಸಂಗ್ರಹ ಅಭಿಯಾನ, ವಿದ್ಯಾರ್ಥಿಗಳು, ಸ್ವಯಂ ಸೇವಕರು, ಎನ್‌ಜಿಒ ಹಾಗೂ ನಾಗರಿಕರ ಜೊತೆಗೂಡಿ ಗಿಡನೆಡುವ ಯೋಜನೆಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT