ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇದ ಮಂತ್ರಗಳ ಪಠಣದ ನಡುವೆ ಅಧಿಕಾರ ಸ್ವೀಕರಿಸಿದ ರಾಜಸ್ಥಾನ ಸಿಎಂ ಭಜನ್ ಲಾಲ್

Published 15 ಡಿಸೆಂಬರ್ 2023, 13:02 IST
Last Updated 15 ಡಿಸೆಂಬರ್ 2023, 13:02 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿ ಭಜನ್ ಲಾಲ್ ಅವರು, ವೇದಮಂತ್ರಗಳ ಪಠಣದ ನಡುವೆ ಮುಖ್ಯಮಂತ್ರಿ ಕಚೇರಿ ಪ್ರವೇಶಿಸಿ ಅಧಿಕಾರ ಸ್ವೀಕರಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸಿಪಿ ಜೋಶಿ, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಅರ್ಜುನ್ ಮೇಘವಾಲ್, ಕೈಲಾಶ್ ಚೌಧರಿ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಮಾಜಿ ವಿಪಕ್ಷ ನಾಯಕ ರಾಜೇಂದ್ರ ರಾಥೋಡ್, ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸತೀಶ್ ಪೂನಿಯಾ, ನೂತನ ಶಾಸಕರು ಮತ್ತು ಮಾಜಿ ಸಂಸದರಾದ ರಾಜ್ಯವರ್ಧನ್ ರಾಥೋಡ್ ಹಾಗೂ ಕಿರೋಡಿ ಮೀನಾ ಮುಖ್ಯಮಂತ್ರಿ ಕಚೇರಿಯಲ್ಲಿ ಉಪಸ್ಥಿತರಿದ್ದರು.

ಈ ಮೊದಲು ಅವರಲ್ಲಿ ಬಹುತೇಕ ನಾಯಕರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದರು. ಡಿಸೆಂಬರ್ 12 ರಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿರುವ ಭಜನ್ ಲಾಲ್ ಅವರನ್ನು ಶಾಸಕಾಂಗ ನಾಯಕನಾಗಿ ಆಯ್ಕೆ ಮಾಡಲಾಗಿತ್ತು.

ಶರ್ಮಾ ಅವರು ಸಿಎಂ ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತಿದ್ದಂತೆ ರಾಜೇ ಅವರು ತಲೆಯ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದರು. ಬಳಿಕ, ಶರ್ಮಾ ಎದ್ದು ನಿಂತು ರಾಜೇ ಮತ್ತು ಇತರರಿಗೆ ಸಿಹಿ ಹಂಚಿದರು.

ಉಪಮುಖ್ಯಮಂತ್ರಿಗಳಾದ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ, ರಾಜಸ್ಥಾನ ವಿಧಾನಸಭೆಯ ನೂತನ ಸ್ಪೀಕರ್ ಆಗಿ ನೇಮಕಗೊಂಡಿರುವ ವಾಸುದೇವ್ ದೇವನಾನಿ ಮತ್ತು ಹಲವು ಶಾಸಕರು ಹಾಗೂ ಇತರ ನಾಯಕರು ಸಿಎಂಒದಲ್ಲಿ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ, ಉಪ ಮುಖ್ಯಮಂತ್ರಿಗಳಾದ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಕೂಡ ತಮ್ಮ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT