ಮುಂಬೈ: ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಸಂದೇಶವಿರುವ ಚೀಟಿ ಪತ್ತೆಯಾದ ಕಾರಣ ನ್ಯೂಯಾರ್ಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮುಂಬೈ ವಿಮಾನ ನಿಲ್ದಾಣಕ್ಕೆ ಸೋಮವಾರ ವಾಪಸ್ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

19 ಸಿಬ್ಬಂದಿ ಸೇರಿ 320ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಿಮಾನ ಸುರಕ್ಷಿತವಾಗಿ ಮುಂಬೈನಲ್ಲಿ ಲ್ಯಾಂಡ್ ಆಗಿದೆ.

‘ಪ್ರಯಾಣಿಕರೊಬ್ಬರು ಶೌಚಾಲಯಕ್ಕೆ ತೆರಳಿದ್ದ ವೇಳೆ ‘ಈ ವಿಮಾನದಲ್ಲಿ ಬಾಂಬ್ ಇದೆ’ ಎಂದು ಬರೆದಿದ್ದ ಚೀಟಿ ಸಿಕ್ಕಿದ್ದು, ತಕ್ಷಣವೇ ಅವರು ಅದನ್ನು ಸಿಬ್ಬಂದಿಗೆ ನೀಡಿದ್ದಾರೆ. ಬಳಿಕ ವಿಮಾನವನ್ನು ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಚೀಟಿಯ ಹೊರತಾಗಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ತನಿಖೆ ನಡೆಸಲಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದ ಅಪರಿಚಿತ ವ್ಯಕ್ತಿಯ ಮೇಲೆ ಎಫ್ಐಆರ್ ದಾಖಲಿಸಲು ಪ್ರಕ್ರಿಯೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

‘AI119 ಮುಂಬೈ– ನ್ಯೂಯಾರ್ಕ್ ವಿಮಾನದಲ್ಲಿ ಬೆದರಿಕೆ ಸಂದೇಶ ಪತ್ತೆಯಾದ ಕಾರಣ ವಿಮಾನ ಮುಂಬೈಗೆ ವಾಪಸ್ಸಾಗಿದೆ. ಸೋಮವಾರ ಬೆಳಿಗ್ಗೆ 10.25ಕ್ಕೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಎಲ್ಲಾ ಪ್ರಯಾಣಿಕರಿಗೂ ಊಟ, ಉಳಿಯುವ ವ್ಯವಸ್ಥೆ ಮಾಡಲಾಗಿದ್ದು, ಮಂಗಳವಾರ ಬೆಳಿಗ್ಗೆ 5 ಗಂಟೆಗೆ ವಿಮಾನದ ಪ್ರಯಾಣವನ್ನು ಮರುನಿಗದಿ ಮಾಡಲಾಗಿದೆ’ ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.