ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರ: ಭಾಗಶಃ ಕುಸಿದು ಬಿದ್ದ ಹೊಸ ಸೇತುವೆ

Published 18 ಜೂನ್ 2024, 16:11 IST
Last Updated 18 ಜೂನ್ 2024, 16:11 IST
ಅಕ್ಷರ ಗಾತ್ರ

ಅರಾರಿಯ, ಬಿಹಾರ: ರಾಜ್ಯದ ಅರಾರಿಯ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಮಂಗಳವಾರ ಕುಸಿದುಬಿದ್ದಿದೆ. ಪ್ರಾಣಹಾನಿಯ ವರದಿಯಾಗಿಲ್ಲ. ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

ರಾಜ್ಯ ಸರ್ಕಾರ ನಿರ್ಮಿಸಿದ್ದ ಈ ಸೇತುವೆಯ ಸಂಪರ್ಕ ರಸ್ತೆಗಳ ನಿರ್ಮಾಣ ಬಾಕಿ ಉಳಿದಿದ್ದುದರಿಂದ ಇನ್ನು ಸಾರ್ವಜನಿಕ ಬಳಕೆಗೆ ಮುಕ್ತವಾಗಿರಲಿಲ್ಲ.

ಅರಾರಿಯಾ ಜಿಲ್ಲೆಯಲ್ಲಿನ ಕುರ್ಸಾ ಕಾಂತಾ ಮತ್ತು ಸಿಕ್ಟಿ ನಡುವೆ ಸಂಪರ್ಕ ಕಲ್ಪಿಸುವುದು ಸೇತುವೆ ನಿರ್ಮಾಣದ ಉದ್ದೇಶವಾಗಿತ್ತು. 

ಸುದ್ದಿಸಂಸ್ಥೆಯ ಜೊತೆಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ರಂಜನ್‌ ಅವರು, ಹೊಸ ಸೇತುವೆಯು ಭಾಗಶಃ ಕುಸಿದಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ’ ಎಂದು ತಿಳಿಸಿದರು.

ಈ ವರ್ಷದ ಮಾರ್ಚ್‌ನಲ್ಲಿ ಕೋಸಿ ನದಿಗೆ ಅಡ್ಡಲಾಗಿ ಸುಪೌಲ್‌ ಜಿಲ್ಲೆಯಲ್ಲಿ ನಿರ್ಮಾಣ ಆಗುತ್ತಿದ್ದ ಸೇತುವೆಯು ಕುಸಿದಿತ್ತು. ಆಗ ಒಬ್ಬರು ಸತ್ತಿದ್ದು, 10 ಮಂದಿ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT