ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ TMC ಬೆಂಬಲಿತ ಸದಸ್ಯನ ಹತ್ಯೆ

Published 29 ಜುಲೈ 2023, 7:35 IST
Last Updated 29 ಜುಲೈ 2023, 7:35 IST
ಅಕ್ಷರ ಗಾತ್ರ

ಪಶ್ಚಿಮ ಬಂಗಾಳ: ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ತೃಣಮೂಲ ಕಾಂಗ್ರೆಸ್‌ ಅಭ್ಯರ್ಥಿಯೊಬ್ಬರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.

24 ಪರಗಣ ಜಿಲ್ಲೆಯ ಮಗ್ರಾಹತ್‌ನಲ್ಲಿ ಶುಕ್ರವಾರ ತಡ ರಾತ್ರಿ  ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಮಗ್ರಾಹತ್‌ನ ಪೂರ್ವ ಗ್ರಾಮ ಪಂಚಾಯತಿ ಸದಸ್ಯ ಮೈಮೂರ್ ಘರಾಮಿ ಎಂದು ಗುರುತಿಸಲಾಗಿದ್ದು, ಶಜಾಹಾನ್‌ ಮೊಲ್ಹಾ ಎನ್ನುವ ವ್ಯಕ್ತಿ ಗಾಯಗೊಂಡಿದ್ದಾನೆ.

ಘಟನೆ ನಡೆದ ಪ್ರದೇಶದ ಸುತ್ತಮುತ್ತ ಪೊಲೀಸ್‌ ಬಿಗಿಭದ್ರತೆ ಕೈಗೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಹತ್ಯೆ ರಾಜಕೀಯ ಪ್ರೇರಿತವಾಗಿ ನಡೆದಿದೆಯೇ ಎನ್ನುವುದು ತನಿಖೆಯಿಂದ ತಿಳಿಯಬೇಕಿದೆ ಎಂದು ಡೈಮಂಡ್‌ ಹಾರ್ಬರ್‌ ಉಪವಿಭಾಗದ ಪೊಲೀಸ್‌ ಅಧಿಕಾರಿ ಮಿಥುನ್‌ ದೆಯ್‌ ಮಾಹಿತಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಹಿಂಸಾಚಾರದ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತೃಣ ಮೂಲ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT