ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | ಮೋದಿ ಘೋಷಣೆ ಕೂಗಲು ಬಂದ ಬಿಜೆಪಿ ಕಾರ್ಯಕರ್ತರ ಬಂಧನ

Published 26 ಮಾರ್ಚ್ 2024, 13:14 IST
Last Updated 26 ಮಾರ್ಚ್ 2024, 13:14 IST
ಅಕ್ಷರ ಗಾತ್ರ

'ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ' ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಸಚಿವ ಕೆ.ಜೆ.ಜಾರ್ಜ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಎದುರು ಘೋಷಣೆ ಕೂಗಲು ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಕಾಂಗ್ರೆಸ್‌ ನಾಯಕರ ಪತ್ರಿಕಾಗೋಷ್ಠಿ ನಡೆಯುತ್ತಿರುವ ಮಾಹಿತಿ ತಿಳಿದು ಘೋಷಣೆ ಕೂಗಲು 20ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಮೋದಿ ಭಾವಚಿತ್ರ ಹಿಡಿದು ಜಮಾಯಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಎಲ್ಲರನ್ನೂ ಬಂಧಿಸಿ ಕರೆದೊಯ್ದರು. 'ನಾವು ಗಲಾಟೆ ಮಾಡಲು ಬಂದಿಲ್ಲ. ಪ್ರತಿಭಟನೆ ಮಾಡಲು ಬಂದಿದ್ದೇವೆ. ಆದರೂ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ' ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT