ನವದೆಹಲಿ: ಸುದ್ದಿ ಪೋರ್ಟಲ್ ‘ನ್ಯೂಸ್‌ಕ್ಲಿಕ್’ನ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ದೆಹಲಿ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ತಮ್ಮ ಬಂಧನ ಮತ್ತು ಏಳು ದಿನಗಳ ಪೊಲೀಸ್ ಕಸ್ಟಡಿಯನ್ನು ಪ್ರಶ್ನಿಸಿ ಪುರಕಾಯಸ್ಥ ಮತ್ತು ಚಕ್ರವರ್ತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಧ್ಯಂತರ ಪರಿಹಾರವಾಗಿ ತಕ್ಷಣ ಬಿಡುಗಡೆ ಮಾಡುವಂತೆ ಕೋರಿದ್ದರು.
ಆದರೆ, ‘ಅರ್ಜಿಗಳಲ್ಲಿ ಯಾವುದೇ ಹುರುಳಿಲ್ಲ’ ಎಂದು ಕೋರ್ಟ್ ಹೇಳಿತು.
ಪುರಕಾಯಸ್ಥ ಮತ್ತು ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರ ವಿಶೇಷ ಘಟಕವು ಅಕ್ಟೋಬರ್ 3ರಂದು ಯುಎಪಿಎ ಅಡಿ ಬಂಧಿಸಿತ್ತು.
ಚೀನಾ ಪರ ಪ್ರಚಾರ ಮಾಡಲು ವಿದೇಶದಿಂದ ಹಣ ಪಡೆದ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.