ನವದೆಹಲಿ: ಯುಎಪಿಎ ಕಾಯ್ದೆಯಡಿ ಬಂಧಿಸಿರುವುದನ್ನು ಪ್ರಶ್ನಿಸಿ ನ್ಯೂಸ್ಕ್ಲಿಕ್ ಸುದ್ದಿಸಂಸ್ಥೆಯ ಸ್ಥಾಪಕ ಪ್ರಬೀರ್ ಪುರಕಾಯಸ್ಥ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆಯನ್ನು ದಾಖಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಅಕ್ಟೋಬರ್ 30ರ ಒಳಗೆ ಪ್ರತಿಕ್ರಿಯಿಸುವಂತೆ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ನ್ಯಾಯಪೀಠವು ಸೂಚಿಸಿತು.

ಪುರಕಾಯಸ್ಥ ಮತ್ತು ಚಕ್ರವರ್ತಿ ಸದ್ಯ ಜೈಲಿನಲ್ಲಿದ್ದು, ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ಕ್ರಮವಾಗಿ ಈ ಇಬ್ಬರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ದೇವದತ್ತ ಕಾಮತ್ ಅವರು ಪೀಠಕ್ಕೆ ನಿವೇದಿಸಿಕೊಂಡರು.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಪೀಠಕ್ಕೆ ಸಿಬಲ್ ಅವರು ಅಕ್ಟೋಬರ್ 16ರಂದು ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.