ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Click | ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅಮಿತ್ ಚಕ್ರವರ್ತಿ

Published 22 ಜನವರಿ 2024, 14:19 IST
Last Updated 22 ಜನವರಿ 2024, 14:19 IST
ಅಕ್ಷರ ಗಾತ್ರ

ನವದೆಹಲಿ: ‘ನ್ಯೂಸ್‌ಕ್ಲಿಕ್‌’ ಸುದ್ದಿಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು  ಭಯೋತ್ಪಾದನೆ ನಿಗ್ರಹ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ (ಯುಎಪಿಎ) ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಹಿಂಪಡೆದಿದ್ದಾರೆ.

 ಚಕ್ರವರ್ತಿ ಮತ್ತು ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ಅವರು ತಮ್ಮ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿತು. ಈ ವೇಳೆ, ಚಕ್ರವರ್ತಿ ಅವರ ಪರ ಹಾಜರಿದ್ದ ವಕೀಲರು, ಅರ್ಜಿ ಹಿಂಪಡೆಯಲು ಅನುಮತಿ ನೀಡಬೇಕೆಂದು ನ್ಯಾಯಪೀಠವನ್ನು ಕೋರಿದರು. ಬಳಿಕ ನ್ಯಾಯಾಲಯವು ಅನುಮತಿ ನೀಡಿತು.

ಚೀನಾ ಪರ ಪ್ರಚಾರ ಮಾಡಲು ವಿದೇಶದಿಂದ ಹಣ ಪಡೆದ ಆರೋಪದ ಮೇಲೆ ಪುರಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರನ್ನು ಅಕ್ಟೋಬರ್‌ 3ರಂದು ದೆಹಲಿ ಪೊಲೀಸರು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT