ನವದೆಹಲಿ: ಕೋವಿಡ್ ಪ್ರಕರಣಗಳ ಏರುಗತಿಗೆ ಸಂಬಂಧಿಸಿದಂತೆ ದೇಶದಲ್ಲಿ ಮುಂದಿನ 40 ದಿನಗಳು ನಿರ್ಣಾಯಕವಾಗಿದ್ದು, ಜನವರಿ ಮಧ್ಯದಲ್ಲಿ ಹೊಸ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

ದೇಶದಲ್ಲಿನ ಕೋವಿಡ್ ಸ್ಥಿತಿಗತಿಗಳನ್ನು ಕುರಿತು ವಿಶ್ಲೇಷಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಚೀನಾ, ಜಪಾನ್, ಅಮೆರಿಕ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆರೋಗ್ಯ ಸೌಲಭ್ಯಗಳ ಕಾರ್ಯಾಚರಣೆಯ ಸಿದ್ಧತೆ ಪರಿಶೀಲಿಸಲಾಗುತ್ತಿದೆ.

ದುಬೈನಿಂದ ಚೆನ್ನೈಗೆ ಆಗಮಿಸಿದ ಮಹಿಳೆ ಮತ್ತು ಅವರ 6 ವರ್ಷದ ಮಗಳಿಗೆಕೋವಿಡ್ ದೃಢಪಟ್ಟಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ತಪಾಸಣೆ: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹಠಾತ್ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ದೆಹಲಿ, ಹೈದರಾಬಾದ್, ಮುಂಬೈ, ಚೆನ್ನೈ, ಅಹಮದಾಬಾದ್, ಪುಣೆ, ಇಂದೋರ್ ಹಾಗೂ ಗೋವಾದ ವಿಮಾನ ನಿಲ್ದಾಣಗಳಿಗೆ ವಿದೇಶದಿಂದ ಬಂದಿಳಿಯುವ ಆಯ್ದ ಕೆಲವು ಪ್ರಯಾಣಿಕರನ್ನು (ರ್‍ಯಾಂಡಮ್) ತಪಾಸಣೆಗೆ ಒಳಪಡಿಸುವ ಪ್ರಕ್ರಿಯೆ ನಡೆಯುತ್ತಿದೆ.

188 ಹೊಸ ಪ್ರಕರಣ ಪತ್ತೆ: ದೇಶದಲ್ಲಿ ಕೋವಿಡ್‌ನ 188 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 3,468ಕ್ಕೆ ತಲುಪಿದೆ ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ.

ಬುಧವಾರ ಬೆಳಿಗ್ಗೆ 8 ಗಂಟೆವರೆಗಿನ ಮಾಹಿತಿ ಪ್ರಕಾರ, 24 ಗಂಟೆ ಅವಧಿಯಲ್ಲಿ 1.34 ಲಕ್ಷ ಕೋವಿಡ್ ತಪಾಸಣೆ ನಡೆಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.