ನವದೆಹಲಿ: ಲೋಕಸಭೆ ಚುನಾವಣೆಯ ಪ್ರತಿ ಹಂತದ ಮತದಾನ ಮುಗಿದ 48 ಗಂಟೆಗಳ ಒಳಗೆ ಮತಗಟ್ಟೆವಾರು ಮತದಾನದ ಸಂಪೂರ್ಣ ಅಂಕಿ ಅಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್), ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

2019ರಲ್ಲಿ ತಾನು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿರುವ ಎಡಿಆರ್, ಎಲ್ಲ ಮತಗಟ್ಟೆಗಳಲ್ಲಿ ದಾಖಲಾದ ಮತದಾನದ ಮಾಹಿತಿಯನ್ನು ತಕ್ಷಣವೇ ಅಪ್‌ಲೋಡ್ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದೆ.

ಚುನಾವಣಾ ಅಕ್ರಮಗಳಿಂದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಈ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದೆ.

ಲೋಕಸಭಾ ಚುನಾವಣೆಯ ಮೊದಲ ಎರಡು ಹಂತಗಳ ಮತದಾನವು ಏ.19 ಮತ್ತು ಏ.26ರಂದು ನಡೆದಿವೆ. ಆದರೆ ಚುನಾವಣಾ ಆಯೋಗವು ಮತದಾನದ ಅಂಕಿ–ಅಂಶವನ್ನು ಏ.30 ರಂದು ಪ್ರಕಟಿಸಿದೆ. ಅಂದರೆ ಮೊದಲ ಹಂತದ ಮತದಾನ ನಡೆದ 11 ದಿನಗಳ ಹಾಗೂ ಎರಡನೇ ಹಂತದ ಮತದಾನ ನಡೆದ ನಾಲ್ಕು ದಿನಗಳ ಬಳಿಕ ದತ್ತಾಂಶವನ್ನು ಪ್ರಕಟಿಸಲಾಗಿದೆ.

‘ಮತದಾನ ನಡೆದ ದಿನ ಸಂಜೆ 7 ಗಂಟೆಗೆ ಆಯೋಗವು ಘೋಷಿಸಿದ ಮತದಾನ ಪ್ರಮಾಣ ಮತ್ತು ಏ.30 ರಂದು ಪ್ರಕಟಿಸಿದ ಪರಿಷ್ಕೃತ ಪ್ರಮಾಣದ ನಡುವೆ ಭಾರಿ ವ್ಯತ್ಯಾಸ (ಶೇ 5 ರಿಂದ 6 ರಷ್ಟು) ಕಂಡುಬಂದಿದೆ. ಇದು ಹಲವು ಅನುಮಾನಗಳನ್ನು ಹುಟ್ಟುಹಾಕಿವೆ’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.