ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಮುನಾ ನದಿ ಸ್ವಚ್ಛಗೊಳಿಸುವ ಯೋಜನೆ: ಎನ್‌ಜಿಟಿ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ಉನ್ನತ ಮಟ್ಟದ ಸಮಿತಿಗೆ ಲೆಫ್ಟಿನೆಂಟ್‌ ಗವರ್ನರ್ ನೇತೃತ್ವ
Published 11 ಜುಲೈ 2023, 15:25 IST
Last Updated 11 ಜುಲೈ 2023, 15:25 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಲೆಫ್ಟಿನೆಂಟ್‌ ಗವರ್ನರ್ ಅವರು ಯಮುನಾ ನದಿ ಸ್ವಚ್ಛಗೊಳಿಸುವುದಕ್ಕೆ ಸಂಬಂಧಿಸಿ ರಚಿಸಿರುವ ಉನ್ನತ ಮಟ್ಟದ ಸಮಿತಿ ನೇತೃತ್ವ ವಹಿಸಿಕೊಳ್ಳುವಂತೆ ಸೂಚಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್‌ ಮಂಗಳವಾರ ತಡೆ ನೀಡಿದೆ.

ಎನ್‌ಜಿಟಿ ಆದೇಶ ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ ಮತ್ತು ಮನೋಜ್‌ ಮಿಶ್ರಾ ಅವರಿದ್ದ ನ್ಯಾಯಪೀಠ ನಡೆಸಿತು.

ಈ ವಿಚಾರವಾಗಿ ಎನ್‌ಜಿಟಿಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರನಿಗೆ ನೋಟಿಸ್‌ ನೀಡಿದ ನ್ಯಾಯಪೀಠ, ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು.

‘ಎನ್‌ಜಿಟಿ ಆದೇಶದಲ್ಲಿ ಉಲ್ಲೇಖವಾಗಿರುವ, ಲೆಫ್ಟಿನೆಂಟ್‌ ಗವರ್ನರ್‌ ಅವರು ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿರುವ ಜೊತೆಗೆ ಸಮಿತಿಯ ನೇತೃತ್ವ ವಹಿಸಬೇಕು ಎಂಬುದಕ್ಕೆ ಮಾತ್ರ ತಡೆ ನೀಡಲಾಗಿದ್ದು, ಆದೇಶದಲ್ಲಿನ ಉಳಿದ ಅಂಶಗಳಿಗೆ ತಡೆ ಅನ್ವಯಿಸುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

ದೆಹಲಿ ಸರ್ಕಾರ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT