ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ ಡಿಜಿಪಿಗೆ ಮಾನವ ಹಕ್ಕು ಆಯೋಗ ನೋಟಿಸ್‌

ಪೊಲೀಸ್‌ ದೌರ್ಜನ್ಯದಿಂದ ಬೇಸತ್ತು ಇಬ್ಬರು ಸಹೋದರರು ಆತ್ಮಹತ್ಯೆ ಶರಣು
Published 27 ಜೂನ್ 2024, 16:29 IST
Last Updated 27 ಜೂನ್ 2024, 16:29 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಪೊಲೀಸ್‌ ದೌರ್ಜನ್ಯದಿಂದ ಬೇಸತ್ತು ಇಬ್ಬರು ಸಹೋದರರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಸಂಬಂಧ ಲಿಖಿತ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಉತ್ತರ ಪ್ರದೇಶ ಡಿಜಿಪಿಗೆ ನೋಟಿಸ್‌ ನೀಡಿದೆ.

‘ಜನರು ದೌರ್ಜನ್ಯಕ್ಕೆ ಒಳಗಾಗದಂತೆ ಪೊಲೀಸರು ರಕ್ಷಣೆ ನೀಡಬೇಕಿದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರೇ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಒಂದು ವೇಳೆ ಇದು ನಿಜವೇ ಆಗಿದ್ದಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ’ ಎಂದು ಮಾನವ ಹಕ್ಕು ಆಯೋಗ ತಿಳಿಸಿದೆ.

ಆಗ್ರಾದ ಇಬ್ಬರು ಸಹೋದರರು ಪೊಲೀಸ್‌ ಸಿಬ್ಬಂದಿಯಿಂದ ದೌರ್ಜನ್ಯಕ್ಕೊಳಗಾಗಿ, ಅದೇ ನೋವಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಜೂನ್‌ 25ರಂದು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಮಾಧ್ಯಮಗಳ ಈ ವರದಿ ನಿಜವೇ ಆಗಿದ್ದಲ್ಲಿ, ಇದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗುತ್ತದೆ. ಹಾಗಾಗಿ ಈ ಪ್ರಕರಣದ ಬಗ್ಗೆ ಒಂದು ವಾರದಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ಡಿಜಿಪಿಗೆ ನೋಟಿಸ್‌ ನೀಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT