ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಂಧ್ರ ಫಾರ್ಮಾ ದುರಂತ: ತನಿಖೆಗೆ ಆದೇಶಿಸಿದ ಎನ್‌ಎಚ್‌ಆರ್‌ಸಿ

Published : 23 ಆಗಸ್ಟ್ 2024, 14:20 IST
Last Updated : 23 ಆಗಸ್ಟ್ 2024, 14:20 IST
ಫಾಲೋ ಮಾಡಿ
Comments

ನವದೆಹಲಿ: ಆಂಧ್ರಪ್ರದೇಶದ ಅನಕಾಪಲ್ಲಿ/ ಜಿಲ್ಲೆಯ ಖಾಸಗಿ ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ 17 ಮಂದಿ ಮೃತಪಟ್ಟು, ಹಲವರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ಆದೇಶಿಸಿದೆ.

ಔಷಧ ತಯಾರಿಕಾ ಕಂಪನಿಯ ಘಟಕದಲ್ಲಿ ಬುಧವಾರ ಸ್ಫೋಟ ಸಂಭವಿಸಿತ್ತು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

ಕೈಗಾರಿಕಾ ಘಟಕದಲ್ಲಿ ಸುರಕ್ಷಾ ಕ್ರಮಗಳ ಅನುಷ್ಠಾನದಲ್ಲಿ ಉಲ್ಲಂಘನೆಯಾಗಿದೆ ಎಂದು ಎನ್‌ಎಚ್‌ಆರ್‌ಸಿ ಆತಂಕ ವ್ಯಕ್ತಪಡಿಸಿದೆ. ಅಲ್ಲದೆ, ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಆಂಧ್ರಪ್ರದೇಶ ಮುಖ್ಯಕಾರ್ಯದರ್ಶಿ ಮತ್ತು  ಪೊಲೀಸ್‌ ಮಹಾ ನಿರ್ದೇಶಕರಿಗೆ ನೋಟಿಸ್‌ ಕಳುಹಿಸಿದೆ.

ಪ್ರಕರಣದ ಕುರಿತು ಎರಡು ವಾರಗಳ ಒಳಗಾಗಿ ವರದಿ ಸಲ್ಲಿಸಬೇಕು. ವರದಿಯಲ್ಲಿ ಎಫ್‌ಐಆರ್‌ ಸ್ಥಿತಿಗತಿ, ಗಾಯಾಳುಗಳ ಚಿಕಿತ್ಸೆ ಮತ್ತು ಮೃತರ ಕುಟುಂಬಸ್ಥರಿಗೆ ನೀಡುವ ಪರಿಹಾರದ ಕುರಿತ ಸಮಗ್ರ ಮಾಹಿತಿ ಇರಬೇಕು ಎಂದು ಹೇಳಿದೆ.

ಸ್ಫೋಟಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆಯೂ ಮಾಹಿತಿ ನೀಡಬೇಕು ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT