ನವದೆಹಲಿ: ಅಕ್ರಮ (ಡಂಕಿ) ಮಾರ್ಗಗಳ ಮೂಲಕ ಅಮೆರಿಕಕ್ಕೆ ಮಾನವ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಅಡಿ ಇಬ್ಬರನ್ನು ಎನ್ಐಎ ಬಂಧಿಸಿದೆ.

ಹಿಮಾಚಲ ಪ್ರದೇಶ ಮತ್ತು ದೆಹಲಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ನಂತರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

ಆರೋಪಿಗಳನ್ನು ಹಿಮಾಚಲ ಪ್ರದೇಶದ ಧರ್ಮಶಾಲೆಯ ಸನ್ನಿ ಅಲಿಯಾಸ್ ಸನ್ನಿ ಡಂಕರ್ ಮತ್ತು ಪ್ರಸ್ತುತ ದೆಹಲಿಯಲ್ಲಿ ನೆಲಸಿದ್ದ ಪಂಜಾಬ್ನ ಶುಭಂ ಸಂಧಾಲ್ ಅಲಿಯಾಸ್ ದೀಪ್ ಹುಂಡಿ ಎಂದು ಗುರುತಿಸಲಾಗಿದೆ. ಶುಕ್ರವಾರ ಇವರನ್ನು ಬಂಧಿಸಲಾಗಿದೆ ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ.

ಇಬ್ಬರೂ ಮಾರ್ಚ್ನಲ್ಲಿ ಬಂಧಿಸಿರುವ ಗಗನ್ದೀಪ್ ಸಿಂಗ್ ಅಲಿಯಾಸ್ ಗೋಲ್ಡಿ ಸಹಚರರು ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.