ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಎನ್ಐಎ ಅಧಿಕಾರಿಗಳಿಂದ ಮೂವರ ಬಂಧನ

Last Updated 7 ಡಿಸೆಂಬರ್ 2022, 12:39 IST
ಅಕ್ಷರ ಗಾತ್ರ

ಚೆನ್ನೈ: ಕೊಯಮತ್ತೂರು ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಉಮರ್ ಫಾರೂಕ್ (39), ಮೊಹಮ್ಮದ್ ತೌಫಿಕ್ (25) ಮತ್ತು ಫಿರೋಜ್ ಖಾನ್ (28) ಎಂದು ಗುರುತಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್‌ ದಾಖಲಿಸಿಕೊಂಡಿರುವ ಎನ್‌ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಅಕ್ಟೋಬರ್ 23ರಂದು ಕೊಯಮತ್ತೂರಿನ ಉಕ್ಕಡಂ ದೇವಾಲಯದ ಬಳಿ ಕಾರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಅದರಲ್ಲಿದ್ದ ಜಮೀಶ್ ಮುಬೀನ್ ಎಂಬಾತ ಮೃತಪಟ್ಟಿದ್ದ. ಘಟನೆಯಲ್ಲಿ ಮುಬೀನ್ ನಂಟು ಹಾಗೂ ಭಯೋತ್ಪಾದನಾಕೃತ್ಯದ ಸಂಚು ಕುರಿತಾಗಿ ತನಿಖೆ ನಡೆಸಲಾಗುತ್ತಿದೆ.

ತಮಿಳುನಾಡು ಸರ್ಕಾರದ ಶಿಫಾರಸಿನಂತೆ ಅಕ್ಟೋಬರ್ 27ರಂದು ಪ್ರಕರಣವನ್ನು ಕೇಂದ್ರ ಸರ್ಕಾರವು ಎನ್‌ಐಎಗೆ ವರ್ಗಾಯಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಈವರಗೆ ಒಂಬತ್ತು ಮಂದಿಯನ್ನು ಬಂಧಿಸಿದ್ದು, ಅವರ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಫೋಟದಲ್ಲಿ ಸಾವನ್ನಪ್ಪಿದ್ದ ಜೆಮಿಶಾ ಮುಬಿನ್ ಜೊತೆ ನಂಟು ಹೊಂದಿರುವ ಆರೋಪದಲ್ಲಿ ಹಲವರನ್ನು ಬಂಧಿಸಲಾಗಿದೆ ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT