ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 7,500 ಪುಟಗಳ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ 10ರಂದು ವಾಹನ ಆಧಾರಿತ ಸ್ಫೋಟಕ ಸಾಧನ (ವಿಬಿಐಇಡಿ) ಸ್ಫೋಟದಲ್ಲಿ 11 ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು.

ಡಾ.ಉಮರ್ ನಬಿ ಸೇರಿದಂತೆ 10 ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿದೆ. ಎಲ್ಲ ಆರೋಪಿಗಳು ಅಲ್ ಖೈದಾ–ಭಾರತೀಯ ಉಪಖಂಡದ (ಎಕ್ಯೂಐಎಸ್) ಸಂಘಟನೆಯಾದ ಅನ್ಸಾರ್ ಗಜ್ವತ್–ಉಲ್–ಹಿಂದ್ (ಎಜಿಯುಎಚ್) ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಆರೋಪಿಗಳಾದ ಅಮೀರ್ ರಶೀದ್ ಮಿರ್, ಜಾಸಿರ್ ಬಿಲಾಲ್ ವಾನಿ, ಡಾ. ಮುಜಾಮಿಲ್ ಶಕೀರ್, ಡಾ. ಅದಿಲ್ ಅಹ್ಮದ್ ರಾಥರ್, ಡಾ. ಶಾಹೀನ್ ಸಯೀದ್, ಮುಫ್ತಿ ಇರ್ಫಾನ್ ಅಹ್ಮದ್ ವಾಗೇ, ಸೋಯಬ್, ಡಾ. ಬಿಲಾಲ್ ನಸೀರ್ ಮಲ್ಲಾ ಮತ್ತು ಯಾಸಿರ್ ಅಹ್ಮದ್ ದರ್ ಹೆಸರುಗಳು ಚಾರ್ಜ್ಶೀಟ್ನಲ್ಲಿದೆ.
.ಕೆಂಪು ಕೋಟೆ ಬಳಿ ಸ್ಫೋಟ ಪ್ರಕರಣ| ಆತ್ಮಹತ್ಯಾ ದಾಳಿ ಸಮರ್ಥಿಸಿದ ಉಮರ್ .ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: ಫರೀದಾಬಾದ್ ಮೂಲದ ಕಾರ್ ಡೀಲರ್ ವಶಕ್ಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.