‘ಈ ಇಬ್ಬರು ಮಹಿಳೆಯ ಜೊತೆ ಸಂಪರ್ಕದಲ್ಲಿದ್ದ ಸಂಶೋಧಕರೊಬ್ಬರ ಮನೆಯ ಮೇಲೆಯೂ ದಾಳಿ ನಡೆದಿದೆ. ಈ ಎಲ್ಲರೂ ಸೇರಿ ಹಣ ಸಂಗ್ರಹಿಸಿ ಛತ್ತೀಸಗಢ, ಜಾರ್ಖಂಡ್ ಹಾಗೂ ಬಿಹಾರದಲ್ಲಿರುವ ನಕ್ಸಲರಿಗೆ ಕಳುಹಿಸುತ್ತಿದ್ದರು. ಗಣಿಗಾರಿಕೆಯಲ್ಲಿನ ಕಾರ್ಮಿಕರ ಹಕ್ಕುಗಳಿಗಾಗಿ ಸಹಕಾರ ನೀಡುತ್ತಿದ್ದ ಎನ್‌ಜಿಒನಲ್ಲಿ ಈ ಮಹಿಳೆಯರು ಕೆಲಸ ಮಾಡುತ್ತಿದ್ದರು. ದಾಳಿಯ ವೇಳೆ ಹಲವು ದಾಖಲೆಗಳು ಲಭ್ಯವಾಗಿವೆ’ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದರು.