ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ಐ ವಿರುದ್ಧ 6 ರಾಜ್ಯಗಳಲ್ಲಿ ಎನ್‌ಐಎ ದಾಳಿ

Published 11 ಅಕ್ಟೋಬರ್ 2023, 4:52 IST
Last Updated 11 ಅಕ್ಟೋಬರ್ 2023, 6:10 IST
ಅಕ್ಷರ ಗಾತ್ರ

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವಿರುದ್ಧ ಶೋಧ ಕಾರ್ಯ ಮುಂದುವರಿಸಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಇಂದು ಆರು ರಾಜ್ಯಗಳಲ್ಲಿ ಸಂಘಟನೆಗೆ ಸೇರಿದ ತಾಣಗಳ ಮೇಲೆ ದಾಳಿ ನಡೆಸಿದೆ.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರ ಬಿಹಾರ ಭೇಟಿ ಸಂದರ್ಭದಲ್ಲಿ ಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದ ಪಿಎಫ್‌ಐ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕೇಂದ್ರಿಯ ತನಿಖಾ ಸಂಸ್ಥೆ ಕೈಗೆತ್ತಿಕೊಂಡಿದೆ.

ಈ ಸಂಬಂಧ ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ತಮಿಳುನಾಡಿನಲ್ಲಿ ಪಿಎಫ್‌ಐಗೆ ಸೇರಿದ ತಾಣಗಳ ಮೇಲೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಕಾನೂನು ಬಾಹಿರ ಚಟುವಟಿಕೆಗಳ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಿಷೇಧಿಸಿ ಆದೇಶ ಹೊರಡಿಸಿತ್ತು. ಆ ವೇಳೆ ಸಂಘಟನೆಯ ಹಲವು ಪ್ರಮುಖರನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT