ನವದೆಹಲಿ: ಮಾನವ ಕಳ್ಳಸಾಗಣೆ ಪ್ರಕರಣಗಳ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆರು ರಾಜ್ಯಗಳಲ್ಲಿ 22 ಸ್ಥಳಗಳಲ್ಲಿ ಗುರುವಾರ ಶೋಧ ಕಾರ್ಯಾಚರಣೆ ಆರಂಭಿಸಿದೆ.

ಬಿಹಾರ, ಉತ್ತರ ಪ್ರದೇಶ ಮತ್ತು ದೆಹಲಿ ಸೇರಿದಂತೆ ಇತರ ಸ್ಥಳಗಳಲ್ಲಿ ಎನ್ಐಎ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
.ಮಾನವ ಕಳ್ಳಸಾಗಣೆ: ದೋಷಾರೋಪ ಪಟ್ಟಿ ಸಲ್ಲಿಸಿದ ಎನ್ಐಎ.ಮಾನವ ಕಳ್ಳಸಾಗಣೆ ತಡೆಗೆ ಜಾಗೃತಿ.
ಮಾನವ ಕಳ್ಳಸಾಗಣೆ ಪ್ರಕರಣದ ಸಂಬಂಧ ಬಿಹಾರದ ಗೋಪಾಲಗಂಜ್ನಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉದ್ಯೋಗದ ನೆಪದಲ್ಲಿ ಯುವಕರನ್ನು ವಿದೇಶಗಳಿಗೆ ಕಳ್ಳಸಾಗಣೆ ಮಾಡುವುದು ಮತ್ತು ಸೈಬರ್ ವಂಚನೆಗಳಲ್ಲಿ ತೊಡಗಿರುವ ನಕಲಿ ಕಾಲ್ ಸೆಂಟರ್ಗಳಲ್ಲಿ ಕೆಲಸ ಮಾಡಲು ಯುವಕ–ಯುವತಿಯರನ್ನು ಬಲವಂತವಾಗಿ ಕೆಲಸ ಮಾಡಿಸಿಕೊಳ್ಳುತ್ತಿರುವ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಎನ್ಐಎಯಿಂದ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
.ಗಡಿಯಲ್ಲಿ ಉಗ್ರರ ನುಸುಳುವಿಕೆ: ಜಮ್ಮುವಿನ 9 ಕಡೆಗಳಲ್ಲಿ ಎನ್ಐಎ ದಾಳಿ.ಖಾಲಿಸ್ತಾನಿ ಉಗ್ರ ಅರ್ಶದೀಪ್ ಸಹಚರನ ಬಂಧಿಸಿದ ಎನ್ಐಎ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.