ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Gazwa-e-Hind case: ದೇಶದ ಹಲವು ಕಡೆ ಎನ್‌ಐಎ ದಾಳಿ

ಗಜ್ವಾ ಏ ಹಿಂದ್ (Gazwa-e-Hind) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ NIA ದೇಶದ ಹಲವು ಕಡೆ ಇಂದು ದಾಳಿ ನಡೆಸಿದೆ.
Published 27 ನವೆಂಬರ್ 2023, 5:03 IST
Last Updated 27 ನವೆಂಬರ್ 2023, 5:03 IST
ಅಕ್ಷರ ಗಾತ್ರ

ಬೆಂಗಳೂರು: ಗಜ್ವಾ ಏ ಹಿಂದ್ (Gazwa-e-Hind) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ NIA ದೇಶದ ಹಲವು ಕಡೆ ಇಂದು ದಾಳಿ ನಡೆಸಿದೆ.

ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ಹಾಗೂ ಕೇರಳದಲ್ಲಿ ದಾಳಿಯಾಗಿದೆ ಎಂದು ತಿಳಿದು ಬಂದಿದೆ.

ಎನ್‌ಐಎ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿ ಹಲವು ಮಹತ್ವದ ಡಿಜಿಟಲ್ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ದಾಳಿಯು ಪಾಕಿಸ್ತಾನದ ಹ್ಯಾಂಡ್ಲರ್‌ಗಳ ಜೊತೆ ಗಜ್ವಾ ಏ ಹಿಂದ್ ಶಂಕಿತರ ಸಂಪರ್ಕವನ್ನು ಬಹಿರಂಗಪಡಿಸಿದೆ ಎಂದು X ನಲ್ಲಿ ಸುದ್ದಿಸಂಸ್ಥೆ ಎಎನ್‌ಐ ಮಾಹಿತಿ ಹಂಚಿಕೊಂಡಿದೆ.

‘ಪಾಕ್ ಪ್ರಚೋದಿತ ಕೆಲವರು ಗಜ್ವಾ ಏ ಹಿಂದ್ ಎಂಬ ವಾಟ್ಸ್‌ಆ್ಯಪ್ ಗ್ರೂಪ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಗ್ರೂಪ್‌ಗಳನ್ನು ರಚಿಸಿಕೊಂಡು ಭಾರತ ವಿರೋಧಿ ವಿಚಾರಗಳನ್ನು ಹರಡುವಲ್ಲಿ ನಿರತರಾಗಿದ್ದರು. ಅಲ್ಲದೇ ಈ ಗ್ರೂಪ್‌ಗಳ ಮುಖಾಂತರ ಸ್ಲೀಪರ್‌ ಸೆಲ್‌ಗಳನ್ನು ರಚಿಸಲು ಪ್ರಚೋದಿಸಿ ಉಗ್ರಗಾಮಿ ಚಟುವಟಿಕೆಗಳಿಗೆ ಯುವಕರನ್ನು ಪ್ರೇರೇಪಿಸಲಾಗುತ್ತಿತ್ತು’ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು 2022 ರಲ್ಲಿ ಎನ್‌ಐಎ ಪ್ರಕರಣ ದಾಖಲಿಸಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT