ಶ್ರೀನಗರ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಮೊಹಮ್ಮದ್ ಯೂಸುಫ್ ಶಾನನ್ನು ಯುಎಪಿಎ ಕಾಯ್ದೆಯಡಿ ಘೋಷಿತ ಅಪರಾಧಿ ಎಂದು ಇಲ್ಲಿನ ಎನ್ಐಎ ನ್ಯಾಯಾಲಯ ಘೋಷಿಸಿದೆ.

ಎನ್ಐಎ ಕಾಯ್ದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯವು, ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ ಮತ್ತು ರಣಬೀರ್ ದಂಡ ಸಂಹಿತೆಯ ಅಡಿಯಲ್ಲಿ ಗಂಭೀರ ಆರೋಪಗಳಿಗೆ ಸಂಬಂಧಿಸಿದಂತೆ ಬದ್ಗಾಮ್ನ ಸೋಯಿಬುಗ್ ನಿವಾಸಿ ಶಾನನ್ನು ಘೋಷಿತ ಅಪರಾಧಿ ಎಂದು ಘೋಷಿಸಿದೆ.

ನ್ಯಾಯಾಲಯದ ದಾಖಲೆಗಳ ಪ್ರಕಾರ, ಆರೋಪಿಯು ಜಕುರಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯುಎಪಿಎ ಕಾಯ್ದೆಯ ಅನ್ವಯ ಶಿಕ್ಷಾರ್ಹ ಅಪರಾಧಗಳನ್ನು ಮಾಡಿದ್ದಾನೆ.

ಬಂಧನಕ್ಕೆ ವಾರಂಟ್ ಹೊರಡಿಸಲಾಗಿದ್ದರೂ, ಸಲಾವುದ್ದೀನ್ ಪತ್ತೆಯಾಗಿಲ್ಲ. ಬಂಧನದಿಂದ ತಪ್ಪಿಸಿಕೊಳ್ಳಲು ಅವನು ಪರಾರಿಯಾಗಿದ್ದಾನೆ ಅಥವಾ ಉದ್ದೇಶಪೂರ್ವಕವಾಗಿ ತನ್ನ ಸ್ಥಳವನ್ನು ಮರೆಮಾಚುತ್ತಿದ್ದಾನೆ ಎಂದು ಕಾನೂನು ಜಾರಿ ಅಧಿಕಾರಿಗಳು ವರದಿ ಮಾಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯಕ್ಕೆ ಹಾಜರಾಗದೇ ಇದ್ದರೆ ಮತ್ತಷ್ಟು ಗಂಭೀರ ಕ್ರಮ ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.