ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ ನಂಟು: ಆರು ಮಂದಿ ವಿರುದ್ಧ 4 ಸಾವಿರ ಪುಟಗಳ ಆರೋಪಪಟ್ಟಿ ಸಲ್ಲಿಕೆ

Published 28 ಡಿಸೆಂಬರ್ 2023, 13:45 IST
Last Updated 28 ಡಿಸೆಂಬರ್ 2023, 13:45 IST
ಅಕ್ಷರ ಗಾತ್ರ

ಮುಂಬೈ: ಐಎಸ್‌ ಉಗ್ರ ಸಂಘಟನೆಯ ಪರವಾಗಿ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಉತ್ತೇಜನ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಆರು ಮಂದಿಯ ವಿರುದ್ಧ ಗುರುವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.

ತಬಿಶ್‌ ಸಿದ್ದೀಖಿ, ಜುಲ್ಫಿಕರ್‌ ಅಲಿ, ಶಾರ್ಜಿಲ್‌ ಶೇಖ್‌, ಅಕಿಫ್‌ ಅತೀಖ್‌ ನಚಾನ್, ಜುಬೈರ್‌ ಶೇಖ್‌ ಮತ್ತು ಅದ್ನಾನಲಿ ಸರ್ಕಾರ್‌ ಎಂಬವರ ವಿರುದ್ಧ ನಾಲ್ಕು ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ  ಸಲ್ಲಿಸಲಾಗಿದೆ. ಆರೋಪಿಗಳನ್ನು ಎನ್‌ಐಎ ಮಹಾರಾಷ್ಟ್ರದಿಂದ ಜುಲೈನಲ್ಲಿ ಬಂಧಿಸಿತ್ತು. ಈ ಪ್ರಕರಣದಲ್ಲಿ 16 ಮಂದಿ ಸಾಕ್ಷಿದಾರರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೇಶದ ಭದ್ರತೆಗೆ ಧಕ್ಕೆ ಉಂಟುಮಾಡಲು ಮತ್ತು ಕೋಮು ಸಾಮರಸ್ಯ ಕದಡಲು ಆರೋಪಿಗಳು ಯತ್ನಿಸಿದ್ದಾರೆ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಹಣ ಸಂಗ್ರಹ ಮಾಡಿದ್ದಾರೆ ಎಂದು ಎನ್‌ಐಎ ಆರೋಪಿಸಿದೆ.

ಆರೋಪಿಗಳು ಐಎಸ್‌ ಸಂಘಟನೆಯ ಜೊತೆಗೆ ನಂಟು ಹೊಂದಿದ್ದಾರೆ ಎಂಬುದು ಅವರಿಂದ ವಶಪಡಿಸಿಕೊಂಡಿರುವ ವಸ್ತುಗಳಿಂದ ದೃಢಪಟ್ಟಿದೆ ಎಂದು ಹೇಳಿದೆ. ಕಳೆದ ಜೂನ್‌ 28ರಂದು ಎನ್‌ಐಎ ಪ್ರಕರಣ ದಾಖಲಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT