ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಟಿಎಫ್ ಭಯೋತ್ಪಾದಕ ಅರ್ಶ್ ದಲಾ ಆಪ್ತ ಸಹಾಯಕನ ವಿರುದ್ಧ ಎನ್‌ಐಎ ಚಾರ್ಜ್ ಶೀಟ್

Published 4 ಜನವರಿ 2024, 14:27 IST
Last Updated 4 ಜನವರಿ 2024, 14:27 IST
ಅಕ್ಷರ ಗಾತ್ರ

ನವದೆಹಲಿ: ಖಲಿಸ್ತಾನ್ ಟೈಗರ್ ಫೋರ್ಸ್ (KTF) ಭಯೋತ್ಪಾದಕ ಅರ್ಷದೀಪ್ ಸಿಂಗ್ ಅಲಿಯಾಸ್ ಅರ್ಶ್ ದಲಾನ ಆಪ್ತ ಸಹಾಯಕ ಮನ್‌ಪ್ರೀತ್ ಸಿಂಗ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ಆರೋಪ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ವರ್ಷ ಫಿಲಿಪೈನ್ಸ್‌ನಿಂದ ಗಡಿಪಾರು ಮಾಡಿದ ಬಳಿಕ ಮನ್‌ಪ್ರೀತ್ ಸಿಂಗ್ ಅಲಿಯಾಸ್ ‌ಪೀಟಾನನ್ನು ಬಂಧಿಸಲಾಗಿತ್ತು.

ದೆಹಲಿಯ ವಿಶೇಷ ಎನ್‌ಐಎ ನ್ಯಾಯಾಲಯದಲ್ಲಿ 2022ರಲ್ಲಿ ದಾಖಲಾದ ಬಹು ರಾಜ್ಯ ಭಯೋತ್ಪಾದಕ, ದರೋಡೆಕೋರ, ಮಾದಕ ವಸ್ತು ಕಳ್ಳಸಾಗಣೆ ಜಾಲದ ಪ್ರಕರಣದಲ್ಲಿ ಪೀಟಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಎನ್‌ಐಎ ವಕ್ತಾರರು ತಿಳಿಸಿದ್ದಾರೆ.

ಈ ಪ್ರಕರಣದ ಮೂರನೇ ಆರೋಪ ಪಟ್ಟಿ ಇದಾಗಿದೆ. ಈವರೆಗೆ 21 ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕೆನಡಾ ಮೂಲದ ದಲಾ ಹಾಗೂ ಕೆಟಿಎಫ್ ನಿರ್ದೇಶನದಂತೆ ಪೀಟಾ ಭಾರತ ಮತ್ತು ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳ ಸಂಗ್ರಹದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ. ದಲಾ ಮತ್ತು ಕೆಟಿಎಫ್‌ಗೆ ನಿಧಿ ಸಂಗ್ರಹಿಸಲು ಬೆದರಿಕೆ ಕರೆಗಳನ್ನು ಮಾಡುತ್ತಿದ. ಅಲ್ಲದೇ ಭಯೋತ್ಪಾದಕ ಅಪರಾಧಗಳು ಮತ್ತು ಪಿತೂರಿ ನಡೆಸಲು ಭಯೋತ್ಪಾದಕ ಸಂಘಟನೆಗೆ ಸದಸ್ಯರನ್ನು ನೇಮಿಸಿಕೊಳ್ಳುವಲ್ಲಿಯೂ ಆತ ತೊಡಗಿಸಿಕೊಂಡಿದ್ದಾನೆ ಎಂದು ವಕ್ತಾರರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ 2023ರ ಫೆಬ್ರುವರಿಯಲ್ಲಿ ಕೆಟಿಎಫ್ ಅನ್ನು ನಿಷೇಧಿಸಿತು. ಜತೆಗೆ ಅದನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT