ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್, ರಾಜಸ್ಥಾನದ 16 ಸ್ಥಳಗಳಲ್ಲಿ ಎನ್‌ಐಎ ದಾಳಿ: 6 ಮಂದಿ ವಶಕ್ಕೆ

Published 27 ಫೆಬ್ರುವರಿ 2024, 11:03 IST
Last Updated 27 ಫೆಬ್ರುವರಿ 2024, 11:03 IST
ಅಕ್ಷರ ಗಾತ್ರ

ನವದೆಹಲಿ: ಖಲಿಸ್ತಾನ್ ಮತ್ತು ಸಂಘಟಿತ ಅಪರಾಧಿಗಳ ಜತೆ ನಂಟು ಹೊಂದಿರುವ ಆರೋಪದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಪಂಜಾಬ್ ಮತ್ತು ರಾಜಸ್ಥಾನದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ.

ದಾಳಿ ವೇಳೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಎನ್‌ಐಎ ಆರು ಮಂದಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದೆ ಎಂದು ವರದಿಯಾಗಿದೆ.

ಪಂಜಾಬ್‌ನ 14 ಮತ್ತು ರಾಜಸ್ಥಾನದ 2 ಸೇರಿದಂತೆ ಒಟ್ಟು 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಈ ದಾಳಿಯು ಭಯೋತ್ಪಾದಕರು, ದರೋಡೆಕೋರರು ಮತ್ತು ಮಾದಕವಸ್ತು ಕಳ್ಳಸಾಗಣೆದಾರ ಸಹಯೋಗದಿಂದ ಆಯೋಜಿಸಲಾದ ಉದ್ದೇಶಿತ ಹತ್ಯೆಗಳು, ಸುಲಿಗೆ ಮತ್ತು ಇತರ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದೆ.

ಖಚಿತ ಮಾಹಿತಿ ಮೇರೆಗೆ ರಾಜ್ಯ ಪೊಲೀಸ್ ಪಡೆಗಳೊಂದಿಗೆ ಎನ್‌ಐಎ ಜಂಟಿಯಾಗಿ ಇಂದು ಮುಂಜಾನೆಯಿಂದ ಶೋಧ ಕಾರ್ಯಾಚರಣೆ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT