ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಕ್ಸಲ್ ನೇಮಕಾತಿ: ಪಂಜಾಬ್, ದೆಹಲಿ, ಹರಿಯಾಣ, ಉತ್ತರ ಪ್ರದೇಶದಲ್ಲಿ ಎನ್‌ಐಎ ದಾಳಿ

Published : 30 ಆಗಸ್ಟ್ 2024, 7:50 IST
Last Updated : 30 ಆಗಸ್ಟ್ 2024, 7:50 IST
ಫಾಲೋ ಮಾಡಿ
Comments

ನವದೆಹಲಿ: ನಿಷೇಧಿತ ಸಂಘಟನೆಯ ನಾಯಕರನ್ನು ಒಳಗೊಂಡ ನಕ್ಸಲ್ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು(ಎನ್‌ಐಎ) ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ದಾಳಿ ನಡೆಸಿದೆ.

ಶೋಧ ಕಾರ್ಯ ಇನ್ನೂ ನಡೆಯುತ್ತಿದ್ದು, ನಕ್ಸಲ್ ಕಾರ್ಯಕರ್ತರು ಮತ್ತು ಓವರ್ ಗ್ರೌಂಡ್ ವರ್ಕರ್ಸ್ (ಒಜಿಡಬ್ಲ್ಯು) ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಭಾರತ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶದಿಂದ ನಕ್ಸಲ್ ನೇಮಕಾತಿ ಮಾಡುವ, ನಕ್ಸಲ್ ಸಿದ್ಧಾಂತವನ್ನು ಪ್ರಚಾರ ಮಾಡುವ ಟಾಸ್ಕ್ ಅನ್ನು ಹಲವು ಮುಂಚೂಣಿ ಸಂಸ್ಥೆಗಳು ಮತ್ತು ವಿದ್ಯಾರ್ಥಿ ಸಂಘಟನೆಗಳಿಗೆ ನೀಡಲಾಗಿದೆ ಎಂದು ಎನ್‌ಐಎ ಆರೋಪಿಸಿದೆ.

ಎನ್‌ಐಎ ಪ್ರಕಾರ, ಆರೋಪಿಗಳು ಈ ಅಜೆಂಡಾ ಇಟ್ಟುಕೊಂಡು ದೇಶದಲ್ಲಿ ಭಯೋತ್ಪಾದನಾ ಕೃತ್ಯ ಮತ್ತು ಹಿಂಸಾಚಾರಕ್ಕೆ ಎಸಗಲು ಸಂಚು ರೂಪಿಸಿದ್ದರು.

ಕಳೆದ ವರ್ಷ ಸೆಪ್ಟೆಂಬರ್ 6ರಂದು, ಉತ್ತರ ಪ್ರದೇಶದಾದ್ಯಂತ ದಾಳಿ ನಡೆಸಿದ್ದ ಎನ್‌ಐಎ , ನಿಷೇಧಿತ ಭಯೋತ್ಪಾದಕ ಸಂಘಟನೆಯನ್ನು ಪುನಶ್ಚೇತನಗೊಳಿಸಲು ನಕ್ಸಲ್ ನಾಯಕರು ಮತ್ತು ಸಿಪಿಐ (ಮಾವೋವಾದಿ) ಕಾರ್ಯಕರ್ತರು ನಡೆಸಿದ ಪ್ರಯತ್ನಗಳನ್ನು ಭೇದಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT