ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

6 ರಾಜ್ಯಗಳು ಸೇರಿದಂತೆ 100 ಸ್ಥಳಗಳಲ್ಲಿ ಎನ್‌ಐಎ ಶೋಧ

Published 17 ಮೇ 2023, 6:26 IST
Last Updated 17 ಮೇ 2023, 6:26 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 6 ರಾಜ್ಯಗಳು ಸೇರಿದಂತೆ ನೂರು ಸ್ಥಳಗಳಲ್ಲಿ ಬುಧವಾರ ಬೆಳಗ್ಗೆಯಿಂದ ಶೋಧ ಕಾರ್ಯ ನಡೆಸುತ್ತಿದೆ. 

ಹರಿಯಾಣ, ಪಂಜಾಬ್‌, ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ವಿವಿಧೆಡೆ ಶೋಧ ಕಾರ್ಯ ನಡೆಯುತ್ತಿದೆ. ಗ್ಯಾಂಗ್‌ಸ್ಟರ್‌ಗಳು, ಮಾದಕ ವಸ್ತು ಸಾಗಣೆಯಲ್ಲಿ ತೊಡಗಿರುವವರು, ಉಗ್ರ ಚಟುವಟಿಕೆಗಳಲ್ಲಿ ತೊಡಿಸಿಕೊಂಡವರು ಹಾಗೂ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡವರ ಮೇಲೆ ದಾಳಿ ಮಾಡಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ಹೇಳಿದ್ದಾರೆ.

ಕಚೇರಿ, ನಿವಾಸಗಳನ್ನು ಮೇಲೆ ದಾಳಿ ಮಾಡಲಾಗಿದ್ದು ಕೆಲವರನ್ನು ಬಂಧಿಸಲಾಗಿದೆ. ದಾಳಿ ಸಂದರ್ಭದಲ್ಲಿ ಸಿಕ್ಕ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೆಲವರ ಬಳಿ ಇದ್ದ ಸುಧಾರಿತ ಸ್ಪೋಟಕಗಳು, ಗನ್‌ಗಳು ಸೇರಿದಂತೆ ಆರ್‌ಡಿಎಕ್ಸ್‌ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT