ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ಐ ಪಿತೂರಿ ಪ್ರಕರಣ: ತಮಿಳುನಾಡಿನ ಆರು ಸ್ಥಳಗಳಲ್ಲಿ ಎನ್‌ಐಎ ದಾಳಿ, ಇಬ್ಬರ ವಶ

Published 9 ಮೇ 2023, 6:49 IST
Last Updated 9 ಮೇ 2023, 6:49 IST
ಅಕ್ಷರ ಗಾತ್ರ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ತಮಿಳುನಾಡಿನ ಆರು ಸ್ಥಳಗಳಲ್ಲಿ ಶೋಧ ನಡೆಸಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧುರೈನ ಪಿಎಫ್‌ಐ ಪ್ರಾದೇಶಿಕ ಘಟಕದ ಅಧ್ಯಕ್ಷ ಮೊಹಮ್ಮದ್ ಕೈಸರ್ ಮತ್ತು ಥೇಣಿಯ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಸಾದಿಕ್ ಅಲಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೆನ್ನೈ, ಮಧುರೈ, ದಿಂಡಿಗಲ್ ಮತ್ತು ಥೇಣಿ ಜಿಲ್ಲೆಗಳಲ್ಲಿ ದಾಳಿ ಮುಂದುವರಿದಿದೆ.

ಕಳೆದ ವರ್ಷದ ಆರಂಭದಲ್ಲಿ ಪ್ರಕರಣ ದಾಖಲಿಸಿದ ನಂತರ ಇಲ್ಲಿಯವರೆಗೆ, ಪಿಎಫ್‌ಐನ ಸುಮಾರು ಒಂದು ಡಜನ್ ಕಾರ್ಯಕರ್ತರನ್ನು ಎನ್‌ಐಎ ಬಂಧಿಸಿದೆ.

ಈ ಪ್ರಕರಣವು ಪಿತೂರಿ ಮತ್ತು ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದೆ, ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸುವುದು ಮತ್ತು ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಹಾಗೂ ಭಾರತದ ವಿರುದ್ಧ ಅಸಮಾಧಾನವನ್ನು ಉಂಟುಮಾಡುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಗಳನ್ನು ನಡೆಸುವುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪಿಎಫ್‌ಐ ನಾಯಕರು ಆಯ್ಕೆ ಮಾಡಿದ ಗುರಿಗಳ ಮೇಲೆ ದಾಳಿ ಮಾಡಲು ಸಂಘಟನೆಯ ಸದಸ್ಯರಿಗೆ ಮಾರಕ ಆಯುಧಗಳ ತರಬೇತಿ ನೀಡಿದ ಆರೋಪ ಪಿಎಫ್‌ಐ ಮೇಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT