ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಕಡೆಗಳಲ್ಲಿ ಎನ್‌ಐಎ ದಾಳಿ

Published 12 ಮಾರ್ಚ್ 2024, 4:16 IST
Last Updated 12 ಮಾರ್ಚ್ 2024, 4:16 IST
ಅಕ್ಷರ ಗಾತ್ರ

ನವದೆಹಲಿ: ಭಯೋತ್ಪಾದಕರು ಮತ್ತು ಗ್ಯಾಂಗ್‌ಸ್ಟರ್ ಜೊತೆ ನಂಟು ಹೊಂದಿರುವ ಪ್ರಕರಣದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಶೋಧ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಪಂಜಾಬ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಢದ 30 ಕಡೆಗಳಲ್ಲಿ ಎನ್‌ಐಎ ವ್ಯಾಪಕ ಶೋಧ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆಯೂ ಭಯೋತ್ಪಾದನೆ ಹಾಗೂ ಮಾಫಿಯಾ ಜಾಲಗಳನ್ನು ಹತ್ತಿಕ್ಕುವ ಭಾಗವಾಗಿ ಎನ್‌ಎಐ ವಿವಿಧೆಡೆ ದಾಳಿ ನಡೆಸಿತ್ತು. ಅಲ್ಲದೆ ಹಲವೆಡೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಎನ್‌ಐಎ ವಕ್ತಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT