ನವದೆಹಲಿ: ಬೆಂಗಳೂರು–ಮೈಸೂರು ಇನ್ಫಾಸ್ಟ್ರಕ್ಚರ್ಕಾರಿಡಾರ್ (ಬಿಎಂಐಸಿ) ಯೋಜನೆಗಾಗಿ 17 ವರ್ಷಗಳ ಹಿಂದಿನ ಭೂಸ್ವಾಧೀನ ಅಧಿಸೂಚನೆಯನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿಗೆ ತಡೆ ನೀಡಬೇಕೆಂದು ಕೋರಿ ನೈಸ್ ಲಿಮಿಟೆಡ್ನ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್ ಫೆಬ್ರುವರಿ 24ರಂದು ನೀಡಿದ್ದ ತೀರ್ಪಿನ ವಿರುದ್ಧ ನೈಸ್ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ವಿಪುಲ್ ಎಂ. ಪಾಂಚೋಲಿ ಅವರ ಪೀಠ ಮಂಗಳವಾರ ವಜಾಗೊಳಿಸಿತು.

ನೈಸ್ ಪರ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಆತ್ಮರಾಮ್ ನಾಡಕರ್ಣಿ ಅವರ ವಾದ ಆಲಿಸಿದ ಪೀಠವು, ‘ಹೈಕೋರ್ಟ್ ನೀಡಿದ ತೀರ್ಪಿನಲ್ಲಿ ಮಧ್ಯಪ್ರವೇಶ ಮಾಡಲು ನಮಗೆ ಯಾವುದೇ ಉತ್ತಮ ಆಧಾರ ಮತ್ತು ಕಾರಣ ಕಂಡುಬಂದಿಲ್ಲ‘ ಎಂದು ಸ್ಪಷ್ಟಪಡಿಸಿತು.

ಪ್ರತಿವಾದಿಗಳಾದ ರತ್ನಾ ಎಸ್.ರೆಡ್ಡಿ ಹಾಗೂ ಇತರರ ಪರವಾಗಿ ಹಿರಿಯ ವಕೀಲರಾದ ಶಶಿಧರ ಎಚ್. ಎನ್ ಮತ್ತು ಕಿರಣ್ ಸೂರಿ ವಾದ ಮಂಡಿಸಿದರು.

‘ಯೋಜನೆಗಾಗಿ ಬೆಂಗಳೂರು ದಕ್ಷಿಣ ತಾಲ್ಲೂಕಿನ ತಲಘಟ್ಟಪುರದ ಒಂದು ಎಕರೆಯನ್ನು ಸ್ವಾಧೀನಪಡಿಸಿಕೊಳ್ಳಲು 17 ವರ್ಷಗಳ ಹಿಂದೆ ಅಧಿಸೂಚನೆ ಹೊರಡಿಸಲಾಗಿತ್ತು. ಅಂತಿಮ ಅಧಿಸೂಚನೆಯಾಗಿ 17 ವರ್ಷ ಕಳೆದರೂ ಪರಿಹಾರ ನೀಡಿಲ್ಲ. ಭೂಸ್ವಾಧೀನ ರದ್ದುಗೊಳಿಸಬೇಕು’ ಎಂದು ಯಲಚೇನಹಳ್ಳಿಯ ರತ್ನಾ ರೆಡ್ಡಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಒಂದು ಎಕರೆಗೆ ಸೀಮಿತವಾಗಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-4-612017536

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.